ಅರಿಯಡ್ಕ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,ದ.ಕ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ ವತಿಯಿಂದ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಬಯಲು ಕಸ ಮುಕ್ತ ಗ್ರಾಮ ಅಭಿಯಾನ 2022 ನಮ್ಮ ಗ್ರಾಮ, ಸ್ವಚ್ಛ ಗ್ರಾಮ ಕಸ ಮುಕ್ತ ಗ್ರಾಮ ನಮ್ಮ ಸಂಕಲ್ಪಕ್ಕೆ ಕಾರ್ಯಕ್ರಮ ಎ.6ರಂದು ಪಂಚಾಯತ್ ವಠಾರದಲ್ಲಿ ಅಧ್ಯಕ್ಷೆ ಸೌಮ್ಯ ಬಾಲಸುಬ್ರಮಣ್ಯ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ, ಸದಸ್ಯರಾದ ಲೋಕೇಶ್ ಚಾಕೋಟೆ, ಹರೀಶ್ ರೈ ಜಾರತ್ತಾರು, ಪುಷ್ಪಾವತಿ ಮರತ್ತಮೂಲೆ, ರಾಜೇಶ್ ಮಣಿಯಾಣಿ ತ್ಯಾಗ ರಾಜೆ, ಮೀನಾಕ್ಷಿ ಪಾಪೆಮಜಲು, ಸಾವಿತ್ರಿ ಪೊನ್ನೆತ್ತಳ್ಕ, ನೋಡೆಲ್ ಅಧಿಕಾರಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಭಾರತಿ, ಗ್ರಾಮ ಮೇಲ್ವಿಚಾರಕಿ ಆರತಿ, ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ ಪೂರ್ಣಿಮಾ ಮತ್ತು ಸದಸ್ಯರು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಪಿಡಿಒ ಪದ್ಮಕುಮಾರಿ ಕಾರ್ಯದರ್ಶಿ ಶಿವರಾಂ ಮೂಲ್ಯ ಹಾಗೂ ಸಿಬ್ಬಂದಿಗಳು ಸಾರ್ವಜನಿಕರು, ಉಪಸ್ಥಿತರಿದ್ದರು. ಕೌಡಿಚ್ಚಾರು ಪೇಟೆಯಲ್ಲಿ ಸ್ವಚ್ಛತೆ ಮಾಡಲಾಯಿತು.