ತಾಲೂಕು ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾಗಿ ವಿಶ್ವಜಿತ್ ಅಮ್ಮುಂಜ ನೇಮಕ

0

ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ವಿಶ್ವಜಿತ್ ಅಮ್ಮುಂಜ ಕುರಿಯ ಇವರನ್ನು ನೇಮಕಾತಿ ಮಾಡಲಾಗಿದೆ.

 


ಪುತ್ತೂರು ಮಾಜಿ ಶಾಸಕಿ  ಶಕುಂತಳಾ ಟಿ.ಶೆಟ್ಟಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈಯವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಜೋಕಿಂ ಡಿ’ಸೋಜರವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾಗಿ ವಿಶ್ವಜಿತ್ ಅಮ್ಮುಂಜರವರನ್ನು ನೇಮಿಸಿ ಆದೇಶ ಹೊರಡಿಸಿರುತ್ತಾರೆ. ವಿಶ್ವಜಿತ್ ಅಮ್ಮುಂಜರವರು ಕುರಿಯ ಗ್ರಾಮದ ಕಾಂಗ್ರೆಸ್ ವಲಯ ಕಾರ್ಯದರ್ಶಿಯಾಗಿ, ಕುರಿಯ ಗ್ರಾಮದ ಗ್ರಾಮ ಸಮಿತಿಯ ಸೇವಾದಳದ ಅಧ್ಯಕ್ಷರಾಗಿ, ಕಾಂಗ್ರೆಸ್ ಇಂಟಕ್ ತಾಲೂಕಿನ ಸಂಘಟನಾ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಾರೆ. ಅಲ್ಲದೆ ಯುವವಾಹಿನಿ ಪುತ್ತೂರು ಘಟಕದ ಮಾಜಿ ಕಾರ್ಯದರ್ಶಿಯಾಗಿ, ಪಾಲಿಂಜೆ ಶ್ರೀ ಮಹಾವಿಷ್ಣುಮೂರ್ತಿ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರಾಗಿ, ಜಯಕರ್ನಾಟಕ ಮೊಟ್ಟೆತ್ತಡ್ಕ ಘಟಕದ ಮಾಜಿ ಕಾರ್ಯದರ್ಶಿಯಾಗಿ, ಪ್ರಸಕ್ತ ಆರ್ಯಾಪು ಬಿಲ್ಲವ ಗ್ರಾಮ ಸಮಿತಿಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿರುತ್ತಾರೆ.

LEAVE A REPLY

Please enter your comment!
Please enter your name here