ಕೆಯ್ಯೂರು ಗ್ರಾಪಂ: ದುಡಿಯೋಣ ಬಾ, ಕಸ ಮುಕ್ತ ಗ್ರಾಮ ಅಭಿಯಾನ ಕಾರ್ಯಕ್ರಮ

0

ಪುತ್ತೂರು: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ದುಡಿಯೋಣ ಬಾ ಅಭಿಯಾನ ಮತ್ತು ಬಯಲು ಕಸ ಮುಕ್ತ ಗ್ರಾಮ ಅಭಿಯಾನ ಕೆಯ್ಯೂರು ಗ್ರಾಮ ಪಂಚಾಯತ್‌ನಲ್ಲಿ ಎ.6 ರಂದು ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಆಗಮಿಸಿದ್ದ ಹಿರಿಯ ಕಾರ್ಮಿಕ ನಿರೀಕ್ಷಕ ಗಣಪತಿ ಹೆಗಡೆಯವರು ವಿವಿಧ ಮಾಹಿತಿ ನೀಡಿದರು. ನರೇಗಾ ತಾಂತ್ರಿಕ ಸಹಾಯಕಿ ಆಕಾಂಕ್ಷಾ ರೈಯವರು ಗಂಡು ಮತ್ತು ಹೆಣ್ಣಿಗೆ ಸಮಾನ ವೇತನ ನೀಡುತ್ತಿರುವ ಉದ್ಯೋಗ ಖಾತರಿ ಯೋಜನೆಯು ಒಂದು ಒಳ್ಳೆಯ ಯೋಜನೆಯಾಗಿದ್ದು ಎಪ್ರೀಲ್‌ನಿಂದ ಕೂಲಿ ದರ ರೂ.309 ಆಗಿದ್ದು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಖಾತರಿ ಯೋಜನೆಯಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸಿದರು. ಗ್ರಾ.ಪಂ ಉಪಾಧ್ಯಕ್ಷೆ ಗಿರಿಜಾ ಕಣಿಯಾರು, ಗ್ರಾಪಂ ಸದಸ್ಯರುಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಆಶಾ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು. ಗ್ರಾಪಂ ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ ಸ್ವಾಗತಿಸಿ, ವಂದಿಸಿ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿಗಳು ಸಹಕರಿಸಿದ್ದರು.

LEAVE A REPLY

Please enter your comment!
Please enter your name here