ಕೆಯ್ಯೂರು : ನೆಹರು ಯುವ ಕೇಂದ್ರ ಮಂಗಳೂರು ವತಿಯಿಂದ ಡಿಜಿಟಲ್‌ ಫೆಲಿಸಿಟೇಷನ್ 2022-22 ಕಾರ್ಯಕ್ರಮ

0

ಪುತ್ತೂರು: ಭಾರತ ಸರ್ಕಾರ ಕಾರ್ಯ ಮತ್ತು ಕ್ರೀಡಾಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ,ಕೆಯ್ಯೂರು ಗ್ರಾಮ ಪಂಚಾಯತ್ ಸರಕಾರಿ ಪದವಿಪೂರ್ವ ಕಾಲೇಜು ಕೆಯ್ಯೂರು ಹಾಗೂ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶ್ರೀ ವಿಷ್ಣು ಯುವ ಶಕ್ತಿ ಬಳಗ ಮಜ್ಜಾರಡ್ಕ ವತಿಯಿಂದ ಡಿಜಿಟಲ್‌ ಫೆಲಿಸಿಟೇಷನ್ 2021-22 ಕಾರ್ಯಕ್ರಮ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸರಕಾರಿ ಪದವಿ ಪೂರ್ವ ಕಾಲೇಜು ಕೆಯ್ಯೂರು ಇದರ ಪ್ರಾಂಶುಪಾಲರಾದ ಇಸ್ಮಾಯಿಲ್ ಇವರು ಮಾತಾನಾಡಿ ಕಾರ್ಯಕ್ರಮದ ಪ್ರಯೋಜನವನ್ನು ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಯುವಸಬಲೀಕರಣ ಮತ್ತು ಕ್ರೀಡಾಇಲಾಖೆ ಇದರ ಮೇಲ್ವಿಚಾರಕರಾಗಿರುವ ಶ್ರೀಕಾಂತ್ ಪೂಜಾರಿ ಬಿರಾವು ಮಾತಾನಾಡಿ ಡಿಜಿಟಲ್ ಮಾಧ್ಯಮ ಎಷ್ಟು ಉಪಕಾರಿಯಾಗಿದೆ ಅದರ ಪ್ರಯೋಜನವನ್ನು ಹಾಗೂ ಬ್ಯಾಂಕಿಗ್ ಕ್ಷೇತ್ರದಲ್ಲಿ ಡಿಜಿಟಲ್ ಮೂಲಕ ದೊರೆಯುವ ಹಲವಾರು ಸೌಲಭ್ಯಗಳ ಬಗ್ಗೆ ಸಂಕ್ಷೀಪ್ತ ಮಾಹಿತಿಯನ್ನು ನೀಡಿದರು. ಅತಿಥಿಯಾಗಿ ಆಗಮಿಸಿದ ಕೆಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ಭಂಢಾರಿ ಕಾರ್ಯಕ್ರಮಕ್ಕೆ ಹಾಗೂ ಸಂಘಟನೆಗೆ ಶುಭಹಾರೈಸಿದರು. ವೇದಿಕೆಯಲ್ಲಿ ನೆಹರು ಯುವ ಕೇಂದ್ರದ ತಾಲೂಕು ಸಂಯೋಜಕರಾದ ಗೌತಮ್ ರಾಜ್ ಕರಂಬಾರು ಮತ್ತು ಪ್ರಜ್ಞಾ ಕುಲಾಲ್ ಕಾವು, ಶ್ರೀ ವಿಷ್ಣು ಯುವ ಶಕ್ತಿ ಬಳಗದ ಅಧ್ಯಕ್ಷರಾದ ಉದಯ್ ಸ್ವಾಮಿನಗರ, ಸಂಘಟನಾ‌ ಕಾರ್ಯದರ್ಶಿ ರಾಜೇಶ್ ಕೆ ಮಯೂರ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕವೃಂದ, ಶ್ರೀ ವಿಷ್ಣು ಯುವ ಶಕ್ತಿ ಬಳಗ ಮಜ್ಜಾರಡ್ಕ ಇದರ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗಿಯಾಗಿದ್ದರು.

ಸಾಂಸ್ಕೃತಿಕ ಕಾರ್ಯದರ್ಶಿ ಭವಿತ್ ಮಜ್ಜಾರ್ ಕಾರ್ಯಕ್ರಮ ನಿರೂಪಿಸಿದರು. ಪ್ರಜ್ಞಾ ಕುಲಾಲ್ ಕಾವು ಸ್ವಾಗತಿಸಿ,ರಾಜೇಶ್ ಕೆ ಮಯೂರ ವಂದಿಸಿದರು.ದೀಪಕ್ ಕೋಡಿಯಡ್ಕ ಪ್ರಾರ್ಥಿಸಿದರು. ಅತಿಥಿಗಳಿಗೆ ಸ್ಮರಣಿಕೆ ನೀಡಿ‌ ಗೌರವಿಸಲಾಯಿತು.

 

LEAVE A REPLY

Please enter your comment!
Please enter your name here