ನಿಡ್ಪಳ್ಳಿ ಗ್ರಾಮ ಪಂಚಾಯತಿನಲ್ಲಿ ಬಯಲು ಕಸ ಮುಕ್ತ ಅಭಿಯಾನ

0

ನಿಡ್ಪಳ್ಳಿ: ಗ್ರಾಮಾಭಿವೃದ್ದಿ ಪಂಚಾಯತ್ ರಾಜ್ ಇಲಾಖೆ, ದ.ಕ ಜಿಲ್ಲಾ ಪಂಚಾಯತ್, ಸ್ವಚ್ಚ ಭಾರತ್ ಮಿಷನ್ ವತಿಯಿಂದ ತಾಲೂಕು ಪಂಚಾಯತ್, ನಿಡ್ಪಳ್ಳಿ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಬಯಲು ಕಸ ಮುಕ್ತ ಅಭಿಯಾನ ಕಾರ್ಯಕ್ರಮ ನಿಡ್ಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಎ.7 ರಂದು ನಡೆಯಿತು. ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರದೀಪ್ ರೈ ಅಭಿಯಾನದ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು. ಪಂಚಾಯತ್ ಅಧ್ಯಕ್ಷೆ  ಗೀತಾ.ಡಿ, ಉಪಾಧ್ಯಕ್ಷ ವೆಂಕಟ್ರಮಣ ಬೋರ್ಕರ್, ಪಿಡಿಒ ಸಂದ್ಯಾಲಕ್ಷ್ಮೀ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಂಚಾಯತ್ ಸದಸ್ಯರು, ಆರೋಗ್ಯ  ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here