ಬೆಳಂದೂರು ಗ್ರಾ.ಪಂ.ನಲ್ಲಿ ಬಯಲು ಕಸ ಮುಕ್ತ ಗ್ರಾಮ ಅಭಿಯಾನ

0

ಕಾಣಿಯೂರು: ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಬದಿಗಳಲ್ಲಿ ಪ್ಲಾಸ್ಟಿಕ್, ತ್ಯಾಜ್ಯ ಇನ್ನಿತರ ಕಸಗಳನ್ನು ಬಿಸಾಡದೇ ಸ್ವಚ್ಚತೆಗೆ ಸಾರ್ವಜನಿಕರು ಹೆಚ್ಚಿನ ಸಹಕಾರ ನೀಡಬೇಕು. ಒಂದು ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದು ಕಂಡು ಬಂದಲ್ಲಿ ಸೂಕ್ತ ಕ್ರಮದೊಂದಿಗೆ ದಂಡ ವಿಧಿಸಲಾಗುವುದು ಎಂದು ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ ಹೇಳಿದರು.

ಅವರು ಎ 7ರಂದು ಬೆಳಂದೂರು ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದ.ಕ ಜಿಲ್ಲಾ ಪಂಚಾಯತ್, ಸ್ವಚ್ಚ ಭಾರತ್ ಮಿಷನ್ ಗ್ರಾಮ ವತಿಯಿಂದ ಬೆಳಂದೂರು ಗ್ರಾಮ ಪಂಚಾಯತ್ ಸಹಯೋಗದಲ್ಲಿ ನಡೆದ ಬಯಲು ಕಸ ಮುಕ್ತ ಗ್ರಾಮ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಡಬ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಸಜಿಕುಮಾರ್ ನೋಡೆಲ್ ಅಧಿಕಾರಿಯಾಗಿ ಭಾಗವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ್, ಉಪಾಧ್ಯಕ್ಷೆ ತೇಜಾಕ್ಷಿ ಕೊಡಂಗೆ, ಸದಸ್ಯರಾದ ವಿಠಲ ಗೌಡ ಅಗಳಿ, ಮೋಹನ್ ಅಗಳಿ, ಪ್ರವೀಣ್ ಕೆರೆನಾರು, ಜಯರಾಮ ಬೆಳಂದೂರು, ಗೌರಿ ಮಾದೋಡಿ, ಪಾರ್ವತಿ ಮರಕ್ಕಡ, ಕುಸುಮಾ ಅಂಕಜಾಲು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕ

LEAVE A REPLY

Please enter your comment!
Please enter your name here