- ಮೂಲನಂಬಿಕೆಯ ಅಧಾರದ ಜೀವನದಲ್ಲಿ ಶಾಂತಿ – ಒಡಿಯೂರು ಶ್ರೀ
- ದೇವಸ್ಥಾನದ ಅಭಿವೃದ್ದಿಗೆ ೧೦ ಲಕ್ಷ ರೂ. ಅನುದಾನ – ನಳಿನ್ ಕುಮಾರ್ ಕಟೀಲು
ಕಾಣಿಯೂರು: ಬದುಕಿನ ಮೌಲ್ಯಗಳಿಗೆ ಅರ್ಥಕೊಟ್ಟು ಜೀವನದಲ್ಲಿ ಒಳ್ಳೆಯ ಕಾರ್ಯಗಳು ಮಾಡಬೇಕು ಆಗ ಮಾತ್ರ ಜೀವನ ಸಾರ್ಥಕತೆ ಪಡೆಯುತ್ತದೆ. ಮೂಡನಂಬಿಕೆ ಬಿಟ್ಟು ಮೂಲನಂಬಿಕೆಯ ಅಧಾರದಲ್ಲಿ ಜೀವನ ಸಾಗಿದಾಗ ಮನಸ್ಸು ಶಾಂತವಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು.
ಅವರು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಎ.7 ರಂದು ರಾತ್ರಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ನಮ್ಮ ಹಿರಿಯರಿಂದ ಬಳುವಳಿಯಾಗಿ ಬಂದ ಆಧ್ಯಾತ್ಮದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿದೆ. ಹೀಗಾಗಿ ಭಾರತಕ್ಕೆ ಪ್ರಪಂಚದಲ್ಲಿ ಇತರೇ ದೇಶಗಳಿಂದ ಹೆಚ್ಚಿನ ಗೌರವ ಪ್ರಾಪ್ತಿಯಾಗುತ್ತಿದೆ. ಊರಿನಲ್ಲಿ ಶಾಂತಿ ನೆಲೆಸಬೇಕಾದರೆ ಧರ್ಮ ಜಾಗೃತಿ ಅಗತ್ಯ. ಇದಕ್ಕಾಗಿ ಶ್ರದ್ದಾ ಕೇಂದ್ರಗಳು ಅಭಿವೃದ್ದಿಯಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ಸಂಸದರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲುರವರು ದಕ್ಷಿಣ ಕನ್ನಡ ಜಿಲ್ಲೆ ದೇಶದ ದೇವರ ಕೋಣೆ ಎಂಬುದಕ್ಕೆ ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ನಡೆಯುವ ದೇವಸ್ಥಾನಗಳ ಜೀರ್ಣೋದ್ದಾರ ಕಾರ್ಯಗಳು ಉದಾಹರಣೆಯಾಗಿದೆ. ಯುವ ಮನಸ್ಸುಗಳು ಜೀರ್ಣೋದ್ದಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಉದಾತ್ತ ಚಿಂತನೆ ಧರ್ಮ ಜಾಗೃತಿಗೆ ಕಾರಣವಾಗಿದೆ ರಾಜ್ಯ ಮುಜರಾಯಿ ಇಲಾಖೆಯಿಂದ ದೇವಸ್ಥಾನದ ಅಭಿವೃದ್ದಿಗೆ 10 ಲಕ್ಷ ರೂ ಅನುದಾನ ನೀಡಲು ಅನುಮತಿ ದೊರೆತಿದೆ, ಅಲ್ಲದೆ ದೇವಳದ ತಡೆಗೋಡೆಗೆ ಸಂಬಂಧಪಟ್ಟಂತೆ ಕ್ಷೇತ್ರದ ಶಾಸಕರ ಮುಖಾಂತರ ಅನುದಾನ ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದರು. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು, ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಾಮೋದರ ಗೌಡ ಕಕ್ವೆ, ಅಗಳಿ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಉದಯ ರೈ ಮಾದೋಡಿ, ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಸಾದ್ ರೈ ಸೊರಕೆ, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅನುವಂಶೀಯ ಮೊಕ್ತೇಸರರಾದ ಪ್ರವೀಣ್‌ಕುಮಾರ್ ಕೆಡೆಂಜಿಗುತ್ತು, ಇಂಜಿನೀಯರ್ ವಸಂತ್ ಭಟ್ ಶುಭಹಾರೈಸಿದರು. ಪದ್ಮನಾಭ ಕೆರೆನಾರು, ಶಿವಾನಂದ ಕೆಡೆಂಜಿಕಟ್ಟ, ಯಶೋಧರ್ ಕೆಡೆಂಜಿಕಟ್ಟ, ಪವಿತ್ರ ಚೆನ್ನಪ್ಪ ನೂಜಿ, ಪ್ರವೀಣ್ ಕೆರೆನಾರು, ಶ್ರೀಧರ ಗೌಡ ಕೊಯಕ್ಕುಡೆ, ಮೇದಪ್ಪ ಕುವೆತ್ತೋಡಿ, ಜತ್ತಪ್ಪ ರೈ ಬರೆಪ್ಪಾಡಿ ಅತಿಥಿಗಳನ್ನು ಗೌರವಿಸಿದರು. ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಪ್ರಾಸ್ತಾವಿಕವಾಗಿ ಮಾತನಾಡಿ, ದೇವಸ್ಥಾನದ ಬ್ರಹ್ಮಕಲಶೋತ್ಸವ ಭಕ್ತರ ನಿರಂತರ ಶ್ರಮದಿಂದ ಯಶಸ್ವಿಯಾಗುತ್ತಿದೆ ಎಂದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸವಣೂರು ಕೆ ಸೀತಾರಾಮ ರೈ ಸ್ವಾಗತಿಸಿ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ನಾಗೇಶ್ ಕೆಡೆಂಜಿ ವಂದಿಸಿದರು. ಶಿಕ್ಷಕ ಗಣೇಶ್ ನಡುವಾಲ್ ಕಾರ್ಯಕ್ರಮ ನಿರೂಪಿಸಿದರು. ಬೆಳಿಗ್ಗೆ ಯಕ್ಷ ಶ್ರೀ ಹವ್ಯಾಸಿ ಬಳಗ ಪುತ್ತೂರು ಇವರಿಂದ ತಾಳಮದ್ದಳೆ, ಸಂಜೆ ಶ್ರೀ ಮಹಾವಿಷ್ಣು ಭಜನಾ ಮಂಡಳಿ ಮುಗೇರು, ಶ್ರೀ ವಿಷ್ಣುಪ್ರಿಯ ಮಹಿಳಾ ಭಜನಾ ಮಂಡಳಿ ಸವಣೂರು ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಸನ್ಮಾನ: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಸುತ್ತುಪೌಳಿ ನಿರ್ಮಿಸಿರುವ ಇಂಜಿನೀಯರ್ ವಸಂತ್ ಭಟ್, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅನುವಂಶಿಯ ಮೊಕ್ತೇಸರರಾದ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಆಡಳಿತ ಸಮಿತಿ ಸದಸ್ಯೆ ಮೋಹಿನಿ. ಪಿ.ಶೇಣವ, ಆಡಳಿತ ಸಮಿತಿಯ ಖಾಯಂ ಆಹ್ವಾನಿತರಾದ ಚೆನ್ನಪ್ಪ ಗೌಡ ನೂಜಿ, ತಾರಾನಾಥ ರೈ ನಗ್ರಿಗುತ್ತು ಹಾಗೂ ಕುದ್ಮಾರು ಸ್ಕಂದಶ್ರೀ ಯುವಕ ಮಂಡಲ, ಕುದ್ಮಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಕುದ್ಮಾರು ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಪದಾಧಿಕಾರಿಗಳನ್ನು ಗೌರವಿಸಲಾಯಿತು.
ಇಂದು ದೇವಸ್ಥಾನದಲ್ಲಿ
ದೇವಸ್ಥಾನದಲ್ಲಿ ಎ.8ರಂದು ಬೆಳಿಗ್ಗೆಯಿಂದ ಸಂಜೆ ತನತ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ಸಂಜೆ ಶ್ರೀ ಶಾರದಾಂಬಾ ಭಜನಾ ಮಂಡಳಿ ಕೆಳಗಿನಕೇರಿ ಕೊಪ್ಪ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಬಳಿಕ ನಡೆಯುವ ಧಾರ್ಮಿಕ ಸಭೆಯಲ್ಲಿ ಧಾರ್ಮಿಕ ಪ್ರವಚನಕಾರರು, ಪುರೋಹಿತ ವೇದಮೂರ್ತಿ ಕೇಶವ ಭಟ್ ಕೇಕಣಾಜೆ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಸವಣೂರು ಕೆ. ಸೀತಾರಾಮ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ, ಮಾಜಿ ಸಚಿವ ರಮಾನಾಥ ರೈ, ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಟಿ.ಶ್ಯಾಮ್ ಭಟ್, ಸಂಪ್ಯ ಅಕ್ಷಯ ಕಾಲೇಜಿನ ಸಂಚಾಲಕ ಜಯಂತ ನಡುಬೈಲು, ನಗ್ರಿ ಕುಮಾರಸ್ವಾಮಿ ಆಚಾರ್ ಬೆಂಗಳೂರು, ಸಾಮಾಜಿಕ ಕಾರ್ಯಕರ್ತ ಎಂ.ಬಿ ಸದಾಶಿವ ಸುಳ್ಯ, ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಕಿನಾರ, ಚಾರ್ವಾಕ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೇಮಣ್ಣ ಗೌಡ ಅಂಬುಲ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ಮನೋರಂಜನಾ ಕಾರ್ಯಕ್ರಮದಲ್ಲಿ ಕಾಪು ರಂಗತರಂಗ ಕಲಾವಿದರಿಂದ ಅಧ್ಯಕ್ಷೆರ್ ತುಳು ಹಾಸ್ಯಮಯ ಸಾಂಸಾರಿಕ ನಾಟಕ ನಡೆಯಲಿದೆ.
ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅಷ್ಠ ಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ನೇರ ಪ್ರಸಾರ ನಡೆದಿದ್ದು ಎ. ೮ರಂದೂ ಸಂಜೆ ನೇರಪ್ರಸಾರ ನಡೆಯಲಿದೆ.