ನೆಲ್ಯಾಡಿ: ಕೌಕ್ರಾಡಿ ಗ್ರಾಮ ಪಂಚಾಯಿತಿಯಲ್ಲಿ ಕುಡಿಯುವ ನೀರು ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದ ಇಚ್ಲಂಪಾಡಿ ಗ್ರಾಮದ ನೇರ್ಲ ನಿವಾಸಿ ಬಾಬು ಗೌಡ(62ವ.)ರವರು ಎ.7ರಂದು ರಾತ್ರಿ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.
ಕೆಲ ದಿನದ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಬಾಬು ಗೌಡರವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ‍್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಅವರು ಎ.೭ರಂದು ರಾತ್ರಿ ನಿಧನರಾಗಿದ್ದಾರೆ. ಮೃತರು ಕಳೆದ 22 ವರ್ಷಗಳಿಂದ ಕೌಕ್ರಾಡಿ ಗ್ರಾಮ ಪಂಚಾಯಿತಿಯಲ್ಲಿ ಕುಡಿಯುವ ನೀರು ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದು ಪ್ರಾಮಾಣಿಕ ಸೇವೆಯ ಮೂಲಕ ಕುಡಿಯುವ ನೀರು ಬಳಕೆದಾರರ ಮೆಚ್ಚುಗೆಗೆ ಪಾತ್ರರಾಗಿದ್ದರು. ಮೃತರು ಪತ್ನಿ ಪ್ರೇಮ, ಪುತ್ರ ಸಚಿನ್, ಪುತ್ರಿಯರಾದ ಪದ್ಮಾವತಿ, ಸುಹಾಸಿನಿಯವರನ್ನು ಅಗಲಿದ್ದಾರೆ. ಮೃತರ ಮನೆಗೆ ಕೌಕ್ರಾಡಿ ಗ್ರಾ.ಪಂ.ಅಧ್ಯಕ್ಷೆ ವನಿತಾ, ಉಪಾಧ್ಯಕ್ಷೆ ಜಿ.ಭವಾನಿ, ಪಿಡಿಒ ಮಹೇಶ್, ಗ್ರಾ.ಪಂ.ಸದಸ್ಯರು, ಸಿಬ್ಬಂದಿಗಳು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.