ಕಡಬ: ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ಆಶ್ರಯದಲ್ಲಿ ಕಡಬ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢ, ಪದವಿಪೂರ್ವ ಹಾಗೂ ಪದವಿ ಶಾಲಾ ವಿದ್ಯಾರ್ಥಿಗಳಿಗೆ ಎಪ್ರಿಲ್ ತಿಂಗಳಿನಲ್ಲಿ ಕನ್ನಡ ಪ್ರಬಂಧ ಸ್ಪರ್ಧೆ ಹಾಗೂ ಮೇ ತಿಂಗಳಿನಲ್ಲಿ ಸ್ವರಚಿತ ಕವನ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ದ.ಕ.ಜಿಲ್ಲಾ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ಅಧ್ಯಕ್ಷ ಕೆ.ಸೇಸಪ್ಪ ರೈ ತಿಳಿಸಿದ್ದಾರೆ.
ಸ್ಪರ್ಧೆಯು ಪ್ರಾಥಮಿಕ, ಪ್ರೌಢ, ಪದವಿಪೂರ್ವ ಮತ್ತು ಪದವಿ ವಿಭಾಗಗಳಿಗೆ ನಡೆಯಲಿದೆ. ಪ್ರಬಂಧ ಸ್ಪರ್ಧೆಯು ಎಪ್ರಿಲ್ ತಿಂಗಳಿನಲ್ಲಿ ನಡೆಯಲಿದ್ದು ೩೦೦ ಪದಗಳಿಗೆ ಮೀರದಂತೆ ಬರೆದು ಎಪ್ರಿಲ್ ೩೦ರೊಳಗೆ ಕಳುಹಿಸಬೇಕು. ಪ್ರಬಂಧ ವಿಷಯ ’ಸಾಹಿತ್ಯ ನಮ್ಮ ಬದುಕಿನ ಮೇಲೆ ಬೀರುವ ಪರಿಣಾಮ’ ಆಗಿರುತ್ತದೆ. ಸ್ವರಚಿತ ಕವನ ಸ್ಪರ್ಧೆಯು ಮೇ ತಿಂಗಳಿನಲ್ಲಿ ನಡೆಯಲಿದ್ದು ಮೇ ೩೧ ಕೊನೆಯ ದಿನವಾಗಿದೆ. ಪ್ರಬಂಧ ಹಾಗೂ ಸ್ವರಚಿತ ಕವನವನ್ನು ವಾಟ್ಸಪ್ ನಂ.702214065೮ ಅಥವಾ sremramakunja@gmail.comಗೆ ಕಳುಹಿಸಬೇಕು. ವಿಜೇತರಾದ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಮಾಣಪತ್ರ ಹಾಗೂ ಬಹುಮಾನ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.