ಕೆದಂಬಾಡಿ: ಬಳ್ಳಮಜಲುಗುತ್ತು ಬೋಳೋಡಿ ಸದಾರಮ ಆಳ್ವರ ಉತ್ತರಕ್ರಿಯೆ, ಶ್ರದ್ಧಾಂಜಲಿ ಸಭೆ

0

 

 

ಪುತ್ತೂರು: ಬಳ್ಳಮಜಲು ಗುತ್ತು ಬೋಳೋಡಿ ಸದಾರಮ ಆಳ್ವರ ಉತ್ತರಕ್ರಿಯೆ ಹಾಗೂ ಶ್ರದ್ಧಾಂಜಲಿ ಸಭೆಯು ಎ.9 ರಂದು ಕೆದಂಬಾಡಿ ಗ್ರಾಮದ ಸನ್ಯಾಸಿಗುಡ್ಡೆ ಗೋಪಾಲನ್ ನಾಯರ್ ಸಭಾಮಂದಿರದಲ್ಲಿ ನಡೆಯಿತು. ದಿವಂಗತರ ಬಗ್ಗೆ ಪ್ರಗತಿಪರ ಕೃಷಿಕ ಕಡಮಜಲು ಸುಭಾಷ್ ರೈ ಮತ್ತು ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈಯವರು ಮಾತನಾಡಿ ನುಡಿನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಕಾವು ಹೇಮನಾಥ ಶೆಟ್ಟಿ, ಅನಿತಾ ಹೇಮನಾಥ ಶೆಟ್ಟಿ, ಓಲೆಮುಂಡೋವು ಮೋಹನ್ ರೈ, ಸಾಜ ರಾಧಾಕೃಷ್ಣ ಆಳ್ವ, ಕೇನ್ಯ ರವೀಂದ್ರನಾಥ ಶೆಟ್ಟಿ, ಬೂಡಿಯಾರ್ ರಾಧಾಕೃಷ್ಣ ರೈ, ಕೆದಂಬಾಡಿ ಗ್ರಾಪಂ ಅಧ್ಯಕ್ಷ ರತನ್ ರೈ ಕುಂಬ್ರ, ಲಕ್ಷ್ಮೀನಾರಾಯಣ ಶೆಟ್ಟಿ ಅರಿಯಡ್ಕ, ಜಯಶಂಕರ್ ರೈ ಬೆದ್ರುಮಾರು ಸೇರಿದಂತೆ ನೂರಾರು ಮಂದಿ ಉಪಸ್ಥಿತರಿದ್ದರು.ಮನೋಹರ ಆಳ್ವ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here