ಎ.11: ಒಳಮೊಗ್ರು ಗ್ರಾಪಂ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ

0

ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್‌ನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಗ್ರಾಮ ಪಂಚಾಯತ್‌ನ 2020-21ನೇ ಸಾಲಿನ ದ್ವಿತೀಯ ಹಾಗೂ 2021-22 ನೇ ಸಾಲಿನ ಪ್ರಥಮ ಹಂತದ ಮತ್ತು 2020-21 ನೇ ಸಾಲಿನ ಕೇಂದ್ರ 14 ನೇ ಮತ್ತು 15 ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಎ.11 ರಂದು ಬೆಳಿಗ್ಗೆ ಒಳಮೊಗ್ರು ಗ್ರಾಪಂ ಸಭಾಂಗಣದಲ್ಲಿ ನಡೆಯಲಿದೆ. ತಾಲೂಕು ಸಮಾಜ ಕಲ್ಯಾಣ ಅಧಿಕಾರಿಯವರು ಸಭಾಧ್ಯಕ್ಷತೆಯಲ್ಲಿ ನಡೆಯುವ ವಿಶೇಷ ಗ್ರಾಮಸಭೆಗೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಭೆಯ ಮಹತ್ವ ಮತ್ತು ಮಾಹಿತಿ ಪಡೆದುಕೊಳ್ಳುವಂತೆ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷೆ ಸುಂದರಿ, ಅಭಿವೃದ್ಧಿ ಅಧಿಕಾರಿ ಅವಿನಾಶ್ ಬಿ.ಆರ್, ಕಾರ್ಯದರ್ಶಿ ಜಯಂತಿ ಹಾಗೂ ಸರ್ವ ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here