ಮಂಗಳೂರು ಅಪಾರ್ಟ್‌ಮೆಂಟ್‌ವೊಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ

0
  • ವಿಟ್ಲದ ಕೆ.ಪಿ. ಹಮೀದ್ ಸಹಿತ ಮೂವರ ಬಂಧನ

ಮಂಗಳೂರು : ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್‌ವೆಲ್‌ನ ಅಪಾರ್ಟ್‌ಮೆಂಟ್‌ವೊಂದರನಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದರೆನ್ನಲಾದ ವಿಟ್ಲದ ಓರ್ವನ ಸಹಿತ ಮೂವರನ್ನು ಬಂಧಿಸಲಾಗಿದೆ. ವಿಟ್ಲದ ಪರ್ತಿಪಾಡಿಯ ಕೆ.ಪಿ. ಹಮೀದ್(54), ಆಕಾಶಭವನ ನಂದನಪುರದ ಅನುಪಮ ಶೆಟ್ಟಿ(46), ಎಕ್ಕೂರು ವಾಸುಕಿ ನಗರದ ನಿಶ್ಮಿತ(23)ಬಂಧಿತ ಆರೋಪಿಗಳು. 

ಮಂಗಳೂರು ನಗರದ ಪೂರ್ವ(ಕದ್ರಿ) ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್ 3ನೇ ಕ್ರಾಸ್ ರಸ್ತೆಯಲ್ಲಿರುವ ಬೇಬಿ ರೆಸಿಡೆನ್ಸಿ ಎಂಬ ಆಪಾರ್ಟ್‌ಮೆಂಟ್‌ನ 2 ನೇ ಮಹಡಿಯ ಫ್ಲಾಟ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್‌ರವರ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ೫ ಮೊಬೈಲ್ ಫೋನು ಹಾಗೂ ೫೦,೦೦೦ ರೂ. ನಗದು, ಮಾರುತಿ ೮೦೦ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸ್ ಕಮೀಷನರ್ ಶಶಿಕುಮಾರ್ ಎನ್, ಐ.ಪಿ.ಎಸ್ ಕಾನೂನು & ಸುವ್ಯವಸ್ಥೆ ವಿಭಾಗದ ಡಿಸಿಪಿ ಹರಿರಾಂ ಶಂಕರ್, ಐಪಿಎಸ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್‌ರವರ ಮಾರ್ಗದರ್ಶನದಲ್ಲಿ, ಸಿಸಿಬಿ ಘಟಕದ ಪೊಲೀಸ್ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್‌ಐರವರಾದ ರಾಜೇಂದ್ರ ಬಿ, ಪ್ರದೀಪ ಟಿ.ಆರ್ ರವರು ಹಾಗೂ ಸಿಸಿಬಿ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

LEAVE A REPLY

Please enter your comment!
Please enter your name here