ಪುತ್ತೂರು: ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಅನ್ಯಧರ್ಮದ ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ವಿದ್ಯಾರ್ಥಿನಿಯರು ಜೊತೆಯಾಗಿರುವುದನ್ನು ಗಮನಿಸಿದ ಸಂಘಟನೆಯೊಂದರ ಕಾರ್ಯಕರ್ತರು ಎಚ್ಚರಿಕೆ ನೀಡಿದ ಘಟನೆ ಮಾ.೧೫ ರಂದು ಸಂಜೆ ನಡೆದಿರುವ ಬಗ್ಗೆ ವರದಿಯಾಗಿದೆ.
ಶಾಲಾ ಕಾಲೇಜಿಗೆ ರಜೆ ಇದ್ದರೂ ಕೂಡಾ ಅನ್ಯಧರ್ಮದ ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ವಿದ್ಯಾರ್ಥಿನಿಯರು ಜೊತೆಯಾಗಿರುವುದನ್ನು ಗಮನಿಸಿದ ಸಂಘಟನೆಯೊಂದರ ಕಾರ್ಯಕರ್ತರು ಅವರನ್ನು ವಿಚಾರಿಸಿ ಸಂಘಟನೆಯ ಕಚೇರಿಗೆ ಕರೆದೊಯ್ದು ಅಲ್ಲಿ ಎಚ್ಚರಿಕೆ ನೀಡಿ ಅವರು ಪೋಷಕರನ್ನು ಕರೆಸಿ ಅವರೊಂದಿಗೆ ಕಳುಹಿಸಿಲಾಗಿದೆ ಎಂದು ತಿಳಿದು ಬಂದಿದೆ