ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕುಮಾರಚಂದ್ರ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಗೋಳ್ತಮಜಲು ನಿವಾಸಿಯಾಗಿರುವ ಕುಮಾರಚಂದ್ರರವರು ಭಾರತೀಯ ಸೇನಾಪಡೆಯಲ್ಲಿ ಜಮ್ಮ ಮತ್ತು ಕಾಶ್ಮೀರ, ಮದ್ರಾಸ್ ಸಹಿತ ವಿವಿದೆಡೆ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಪೊಲೀಸ್ ಇಲಾಖೆ ಸೇರ್ಪಡೆಗೊಂಡ ಇವರು ವಿರಾಜಪೇಟೆ ಮತ್ತು ಬಳ್ಳಾರಿಯಲ್ಲಿ ಡಿವೈಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಕುಮಾರಚಂದ್ರರವರು ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿ ಗುರುತಿಸಿಕೊಂಡಿರುವ ಇವರು ಜನಸ್ನೇಹಿ ಪೊಲೀಸ್ ಅಧಿಕಾರಿ ಎಂದೇ ಚಿರಪರಿಚಿತರಾಗಿದ್ದಾರೆ.