- ಕೆದಂಬಾಡಿ ಗ್ರಾ.ಪಂ ಮಕ್ಕಳ ಗ್ರಾಮ ಸಭೆಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ ವಿದ್ಯಾರ್ಥಿಗಳು
ಪುತ್ತೂರು: `ಸುದ್ದಿ’ ಜನಾಂದೋಲನ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಲಂಚ, ಭ್ರಷ್ಟಾಚಾರ ವಿರುದ್ಧದ ಅಭಿಯಾನಕ್ಕೆ ಬೆಂಬಲ ಸೂಚಿಸಿ ಕೆದಂಬಾಡಿ ಮಕ್ಕಳ ಗ್ರಾಮ ಸಭೆಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಗ್ರಾ.ಪಂ ಉಪಾಧ್ಯಕ್ಷ ಭಾಸ್ಕರ ರೈ ಮಿತ್ರಂಪಾಡಿಯವರು ಪ್ರತಿಜ್ಞಾವಿಧಿ ಬೋಧಿಸಿದರು. ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ತಮ್ಮ ಕೈಯನ್ನು ಮುಂದಕ್ಕೆ ಚಾಚಿ ಪ್ರತಿಜ್ಞೆ ಸ್ವೀಕರಿಸಿದರು. ಸುದ್ದಿ ಹಮ್ಮಿಕೊಂಡಿರುವ ಭ್ರಷ್ಟಾಚಾರದ ವಿರುದ್ಧದ ಹೋರಾಟ ಶ್ಲಾಘನೀಯ ಎಂದು ಗ್ರಾ.ಪಂ ಉಪಾಧ್ಯಕ್ಷ ಭಾಸ್ಕರ ರೈ ಮಿತ್ರಂಪಾಡಿ ಹೇಳಿದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ, ಗ್ರಾ.ಪಂ ಸದಸ್ಯರು, ಅಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು.