ಮಾ.6: ಸೇಡಿಯಾಪು ಫ್ರೆಂಡ್ಸ್ ಕ್ಲಬ್ ವತಿಯಿಂದ ಮ್ಯಾಟ್ ಕಬಡ್ಡಿ ಪಂದ್ಯಾಟ, ಉಚಿತ ದಂತ ಚಿಕಿತ್ಸಾ ಶಿಬಿರ, ನೇತ್ರ ಜಾಗೃತಿ, ನೋಂದಾವಣಿ ಕಾರ್ಯಕ್ರಮ

0

ಪುತ್ತೂರು: ಕೋಡಿಂಬಾಡಿಯ ಸೇಡಿಯಾಪು ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಯೋಗದಲ್ಲಿ ಜಿಲ್ಲಾಮಟ್ಟದ 60 ಕೆ.ಜಿ. ವಿಭಾಗದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ, ಸೈನಿಕರಿಗೆ ಸನ್ಮಾನ ಯೆನೆಪೋಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಸಮುದಾಯ ದಂತ ವಿಭಾಗ ಯೆನೆಪೋಯ ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆ ಆಶ್ರಯದಲ್ಲಿ ಉಚಿತ ವೈದ್ಯಕೀಯ ದಂತ ಶಿಬಿರ ಮತ್ತು ನೇತ್ರ ಜಾಗೃತಿ ಹಾಗೂ ನೇತ್ರದಾನ ನೋಂದಾವಣಿ ಕಾರ್ಯಕ್ರಮ ಮಾ.6ರಂದು ಸೇಡಿಯಾಪು ಕ್ರೀಡಾಂಗಣದಲ್ಲಿ ನಡೆಯಲಿದೆ.

ಸುದ್ದಿ ಮೀಡಿಯಾ ಸೆಂಟರ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸೇಡಿಯಾಪು ಫ್ರೆಂಡ್ಸ್ ಇದರ ಗೌರವಾಧ್ಯಕ್ಷ ಜಯಪ್ರಕಾಶ್ ಕೆ. ಬದಿನಾರು ಅವರು, ಫ್ರೆಂಡ್ಸ್ ಕ್ಲಬ್ ಕಳೆದ 20 ವರ್ಷಗಳಿಂದ ವಿವಿಧ ಸಮಾಜಮುಖಿ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ. ಜಿಲ್ಲಾ ಮಟ್ಟದ 60 ಕೆ.ಜಿ. ವಿಭಾಗದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ, ಉಚಿತ ವೈದ್ಯಕೀಯ ದಂತ ಶಿಬಿರ ಮತ್ತು ನೇತ್ರ ಜಾಗೃತಿ ಹಾಗೂ ನೇತ್ರದಾನ ನೋಂದಾವಣಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಮಾ.6ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದರು.

ಶಾಸಕ ಸಂಜೀವ ಮಠಂದೂರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಪಂದ್ಯಾಟವನ್ನು ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಉದ್ಘಾಟಿಸಲಿದ್ದಾರೆ. ಖ್ಯಾತ ವೈದ್ಯ ಡಾ. ಸುರೇಶ್ ಪುತ್ತೂರಾಯರು ವೈದ್ಯಕೀಯ ಶಿಬಿರ ಉದ್ಘಾಟಿಸಲಿದ್ದಾರೆ. ನೇತ್ರದಾನ ನೋಂದಾವಣೆ ಶಿಬಿರವನ್ನು ಖ್ಯಾತ ವೈದ್ಯ ಡಾ. ರಘು ಬೆಳ್ಳಿಪ್ಪಾಡಿ ಉದ್ಘಾಟಿಸಲಿದ್ದಾರೆ. ದಂತ ಚಿಕಿತ್ಸಾ ಶಿಬಿರವನ್ನು ಭಾರತೀಯ ದಂತ ವೈದ್ಯಕೀಯ ಸಂಘದ ಪುತ್ತೂರು ಶಾಖೆಯ ಮಾಜಿ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ. ಅವರು ಉದ್ಘಾಟನೆ ಮಾಡಲಿದ್ದಾರೆ. ಉದ್ಯಮಿಗಳಾದ ಬಶೀರ್ ಹಾಜಿ ಅನಿಲಕೋಡಿ ನೇತ್ರದಾನಕ್ಕೆ ಹೆಸರು ನೋಂದಾಯಿಸಿದವರಿಗೆ ಪ್ರಮಾಣ ಪತ್ರ ವಿತರಣೆ ಮಾಡಲಿದ್ದಾರೆ. ಪುತ್ತೂರು ಡಿವೈಎಸ್‌ಪಿ ಡಾ| ಗಾನ ಪಿ. ಕುಮಾರ್, ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಚಂದ್ರ ಪೂಜಾರಿ, ೩೪ ನೆಕ್ಕಿಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಎನ್., ಕೋಡಿಂಬಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು, ಕೋಡಿಂಬಾಡಿ ಗ್ರಾಮ ಪಂಚಾಯತ್ ಸದಸ್ಯ ಜಗನ್ನಾಥ ಶೆಟ್ಟಿ ನಡುಮನೆ, ಕಡಬ ಪೊಲೀಸ್ ಠಾಣೆಯ ಉಪನಿರೀಕ್ಷಕ ರುಕ್ಮ ನಾಯ್ಕ, ಪುತ್ತೂರು ತಾಲೂಕು ಸರಕಾರಿ ನೌಕರರ ಸಂಘದ ನಿರ್ದೇಶಕ ಚಂದ್ರ ನಾಯಕ್, ಗೆಜ್ಜೆಗಿರಿ ಕ್ಷೇತ್ರಾಡಳಿತ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಸುದ್ದಿ ಬಿಡುಗಡೆಯ ಪ್ರಧಾನ ವರದಿಗಾರ ಸಂತೋಷ್ ಕುಮಾರ್ ಶಾಂತಿನಗರ, ಬೆಂಗಳೂರು ಆಡಿಟಿಂಗ್ ಕಂಪನಿಯ ಸೀನಿಯರ್ ಮ್ಯಾನೇಜರ್ ಕರುಣಾಕರ ಸಾಮಾನಿ, ಉದ್ಯಮಿ ಜೋಕಿಂ ಮಿನೇಜಸ್ ಗೌರವ ಉಪಸ್ಥಿತಿ ವಹಿಸಲಿದ್ದಾರೆ ಎಂದು ಜಯಪ್ರಕಾಶ್ ಬದಿನಾರು ಹೇಳಿದರು.

ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ. ರಾಜ್ಯ ಅಮೆಚೂರು ಕಬಡ್ಡಿ ಅಸೋಸಿಯೇ?ನ್ ಚೇರ್‌ಮೆನ್ ರಾಕೇಶ್ ಮಲ್ಲಿ ಅಧ್ಯಕ್ಷತೆ ವಹಿಸಲಿದ್ದಾರೆ. ಕೋಡಿಂಬಾಡಿ ರೈ ಎಸ್ಟೇಟ್ ಮಾಲಕರಾದ ಉದ್ಯಮಿ ಅಶೋಕ್ ಕುಮಾರ್ ರೈ ಸನ್ಮಾನ ನೆರವೇರಿಸಲಿದ್ದಾರೆ. ಪುತ್ತೂರು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ, ಅಕ್ಷಯ ಸಮೂಹ ಸಂಸ್ಥೆಗಳ ಮಾಲಕ ಜಯಂತ ನಡುಬೈಲು, ಪುತ್ತೂರು ಗಣೇಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಉಪಾಧ್ಯಕ್ಷ ರಾಜಶೇಖರ್ ಜೈನ್, ನಗರಸಭೆಯ ಮಾಜಿ ಅಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಸಿಝ್ಲರ್ ಮಾಲಕ ಪ್ರಸನ್ನ ಕುಮಾರ್ ಶೆಟ್ಟಿ, ಬೆಂಗಾಲ್ ವಾರಿಯರ್ಸ್ ತಂಡದ ಪ್ರೊ ಕಬಡ್ಡಿ ಆಟಗಾರ ಮಿಥಿನ್ ಗೌಡ, ಉದ್ಯಮಿ ಡೆನ್ನಿಸ್ ಮಸ್ಕರೇನ್ಹಸ್, ಪುತ್ತೂರು ನಗರಸಭಾ ಸದಸ್ಯ ಮುಹಮ್ಮದ್ ರಿಯಾಝ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿಜಯ ಬ್ಯಾಂಕ್‌ನ ನಿವೃತ್ತ ಮ್ಯಾನೇಜರ್ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಜಿಲ್ಲಾ ಕಂಬಳ ಸಮಿತಿ ಉಪಾಧ್ಯಕ್ಷ ಕೇಶವ ಭಂಡಾರಿ ಕೈಪ, ಉದ್ಯಮಿ ಕೆದಿಕಂಡೆಗುತ್ತು ಸತೀಶ್ ಶೆಟ್ಟಿ, ಮೆಸ್ಕಾಂ ಸುಬ್ರಹ್ಮಣ್ಯ ಎಇ ಚಿದಾನಂದ, ಮೆಸ್ಕಾಂ ಬೆಳ್ಳಾರೆ ಜೆಇ ಪ್ರಸಾದ್ ಕೆ.ವಿ., ಕೋಡಿಂಬಾಡಿ ಕ್ಷೇತ್ರದ ತಾಲೂಕು ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ಶ್ರೀ ಕೃಷ್ಣ ಗಾರ್ಬಲ್ ಮಾಲಕ ಭವಿನ್ ಶೇಟ್, ಯುವ ಉದ್ಯಮಿ ಸುದೇಶ್ ಶೆಟ್ಟಿ ಶಾಂತಿನಗರ, ರೋಟರಿ ಕ್ಲಬ್ ಉಪ್ಪಿನಂಗಡಿ ಅಧ್ಯಕ್ಷ ನೀರಜ್ ಶೆಟ್ಟಿ, ಯುವವಾಹಿನಿ ವಿಟ್ಲ ಘಟಕದ ಅಧ್ಯಕ್ಷ ಯಶವಂತ ಪೂಜಾರಿ, ಉಪ್ಪಿನಂಗಡಿಯ ಉದ್ಯಮಿ ಶೈಲೇಶ್ ಕುಮಾರ್, ನಾರ್ಟನ್ ಸೋಲಾರ್‌ನ ಯತೀಶ್ ಗೌಡ ಪುತ್ಯೆ, ಉದ್ಯಮಿ ರಫೀಕ್ ಎಂ.ಕೆ. ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರಾದ ಸವಿತಾ ವಿ.ಶೆಟ್ಟಿ, ಸೈನಿಕರಾದ ಪುಷ್ಪರಾಜ್ ಗೌಡ ಬಾರ್ತಿಕುಮೇರು ಮತ್ತು ಚಂದ್ರಹಾಸ ಗೌಡ ಸೇಡಿಯಾಪು ಅವರಿಗೆ ಸನ್ಮಾನ ಸಮಾರಂಭ ನಡೆಯಲಿದೆ ಎಂದು ತಿಳಿಸಿದ ಜಯಪ್ರಕಾಶ್ ಅವರು ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಚಂದ್ರಶೇಖರ ಕುಲಾಲ್ ವಹಿಸಲಿದ್ದಾರೆ.

ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿರಂಜನ್ ರೈ ಮಠಂತಬೆಟ್ಟು, ಪ್ರಗತಿಪರ ಕೃಷಿಕ ರಾಜೀವ ಶೆಟ್ಟಿ ಕೇದಗೆ, ಕ್ಲಾಸ್ 1 ಪಿಡಬ್ಲೂಡಿ ಗುತ್ತಿಗೆದಾರ ಪ್ರಸಾದ್ ಜೈನ್ ನೀರ್ಪಾಜೆ, ಅಜಿತ್ ಕೆ.ಆರ್. ಪೂಜಾರಿ ಕೋಡಿಂಬಾಡಿ, ಸ್ಮಾರ್ಟ್ ಸಾಫ್ಟ್ ಟೆಕ್ನಾಲಜಿ ಪುತ್ತೂರು ಮ್ಯಾನೇಜಿಂಗ್ ಡೈರೆಕ್ಟರ್ ಸತೀಶ್ ನಾಯಕ್ ಮೋನಡ್ಕ, ದಿಶಾನ್ ಪ್ರಿಂಟರ್ಸ್ ಮಾಲಕ ಮೋಹನ್ ಕುಮಾರ್ ಮೇಲಿನಹಿತ್ಲು, ಕೆಮ್ಮಾಯಿ ಉದ್ಯಮಿ ಉಲ್ಲಾಸ್ ಲೋಬೋ, ಇಬ್ರಾಹಿಂ ಸೇಡಿಯಾಪು ಬಹುಮಾನ ವಿತರಣೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಬೆಳಗ್ಗೆ 10ರಿಂದ ಮಧ್ಯಾಹ್ನ ೧ರವರೆಗೆ ನೇತ್ರ ತಪಾಸಣಾ ಶಿಬಿರ, ಸಾಮಾನ್ಯ ವೈದ್ಯಕೀಯ ವಿಭಾಗ, ದಂತ ತಪಾಸಣೆ ಮತ್ತು ಚಿಕಿತ್ಸಾ ವಿಭಾಗದಲ್ಲಿ ಶಿಬಿರ ನಡೆಯಲಿದೆ. ನೇತ್ರದಾನಕ್ಕೆ ಸುಮಾರು 100ಮಂದಿಯ ನೋಂದಾವಣಿಯ ಗುರಿ ಹೊಂದಲಾಗಿದೆ ಎಂದ ಅವರು ಕಬಡ್ಡಿ ಪಂದ್ಯಾಟವು ಸುದ್ದಿ ಪುತ್ತೂರು ನ್ಯೂಸ್ ಯೂ ಟ್ಯೂಬ್ ಚಾನೆಲ್ ಮತ್ತು ಫೇಸ್‌ಬುಕ್ ಪೇಜ್‌ನಲ್ಲಿ ನೇರಪ್ರಸಾರಗೊಳ್ಳಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಚಂದ್ರಶೇಖರ ಕುಲಾಲ್ ಮತ್ತು ಪ್ರಧಾನ ಕಾರ್ಯದರ್ಶಿ ಸತೀಶ್ ಮಡಿವಾಳ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here