ಪುತ್ತೂರು : ದಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ದಕ ಜಿಲ್ಲೆ ಇವರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿ ಪಡೆದು ಯಶಸ್ಸು ಕಂಡಿರುವ ಜಿಲ್ಲೆಯ 7 ತಾಲೂಕಿನಿಂದ ತಲಾ ಒಬ್ಬ ಮಹಿಳಾ ಫಲಾನುಭವಿಯನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ಮಾ.8 ರಂದು ನಡೆಯಿತು. ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೂವೆಂಜ ನಿವಾಸಿ ಅನಿತಾ ಕೂವೆಂಜ ಹಾಗೂ ಕಡಬ ತಾಲೂಕಿನ ಆಲಂಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೈಲಕೆರೆ ನಿವಾಸಿ ಮೀನಾಕ್ಷಿ ಸುಂದರ ಪೂಜಾರಿರವರನ್ನು ದಕ ಜಿಲ್ಲಾಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.
ದ.ಕ. ಸಂಸದ ನಳೀನ್ ಕುಮಾರ್ ಕಟೀಲು, ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್, ದ.ಕ.ಜಿ.ಪಂಚಾಯತ್ ಸಿಇಒ ಡಾ.ಕುಮಾರ, ನರೇಗಾ ಸಹಾಯಕ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಕಿಶನ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.