ಕಾವು ನವೋದಯ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ

0

  • ಸ್ವಸಹಾಯ ಗುಂಪುಗಳಿಗೆ ಲಾಭಾಂಶ ವಿತರಣೆ

ಕಾವು: ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಪ್ರವರ್ತಿತ ನವೋದಯ ಸ್ವಸಹಾಯ ಸಂಘಗಳ ಒಕ್ಕೂಟ ಕಾವು-ಮಾಡ್ನೂರು ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಗುಂಪುಗಳ ಲಾಭಾಂಶ ವಿತರಣಾ ಕಾರ್ಯಕ್ರಮವು ಮಾ.೧೦ರಂದು ಬೆಳಿಗ್ಗೆ ಕಾವು ಸಹಕಾರ ಸಂಘದ ಶಿವಸದನ ಸಭಾಭವನದಲ್ಲಿ ನಡೆಯಿತು.

 


ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿ ದೀಪ ಬೆಳಗಿಸಿ ಉದ್ಘಾಟಿಸಿದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರು ಮಾತನಾಡಿ ಸಂಘಟನೆಯಲ್ಲಿ ಎಲ್ಲರೂ ಒಟ್ಟಾಗಿ ಒಳ್ಳೆಯ ಉದ್ದೇಶವನ್ನಿಟ್ಟುಕೊಂಡು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಯಶಸ್ಸು ಸಾಧ್ಯವಾಗುತ್ತದೆ, ಚಿದಾನಂದ ಆಚಾರ್ಯರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದ ಮಾದರಿಯಲ್ಲೇ ನೂತನ ಪದಾಧಿಕಾರಿಗಳ ಅವಧಿಯಲ್ಲೂ ಇನ್ನಷ್ಟು ಒಳ್ಳೆಯ ಕಾರ್ಯಕ್ರಮಗಳು ಮೂಡಿ ಬರಲಿದೆ ಎಂದು ಶುಭಹಾರೈಸಿದರು.

ಮುಖ್ಯ ಅತಿಥಿಯಾಗಿದ್ದ ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟುರವರು ಮಾತನಾಡಿ ನವೋದಯ ಒಕ್ಕೂಟವು ತಾಲೂಕಿನಲ್ಲಿ ಮಾದರಿ ಒಕ್ಕೂಟವಾಗಿ ಕಾರ್ಯನಿರ್ವಹಿಸುತ್ತಿದು, ಚಿದಾನಂದ ಆಚಾರ್ಯರವರ ಅಧ್ಯಕ್ಷತೆಯಲ್ಲಿ ಅನೇಕ ಕಾರ್ಯಕ್ರಮಗಳು ಉತ್ತಮ ರೀತಿಯಲ್ಲಿ ನಡೆದಿದೆ, ಮುಂದಿನ ಪದಾಧಿಕಾರಿಗಳಿಗೆ ಸವಾಲಿನ ರೀತಿಯ ಕಾರ್ಯಕ್ರಮವನ್ನು ಮಾಡಿದ್ದಾರೆ. ನವೋದಯ ಸ್ವಸಹಾಯ ಸಂಘಗಳ ಅಭ್ಯುದಯಕ್ಕಾಗಿ ಸರಕಾರದಿಂದ ೦% ಬಡ್ಡಿ ದರದಲ್ಲಿ ಒಂದು ಸಂಘಕ್ಕೆ ರೂ.೨೦ಲಕ್ಷದವರೆಗೆ ಸಾಲ ಸೌಲಭ್ಯ ಪಡೆಯುವ ಅವಕಾಶವಿದೆ ಎಂದು ಹೇಳಿದರು.

ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಎಸ್.ಬಿ ಜಯರಾಮ ರೈ ಬಳಜ್ಜರವರು ಮಾತನಾಡಿ ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷರಾಗಿರುವ ಡಾ. ರಾಜೇಂದ್ರ ಕುಮಾರ್‌ರವರ ಕನಸಿನಂತೆ ನವೋದಯ ಸ್ವಸಹಾಯ ಸಂಘಗಳ ಅಭ್ಯುದಯದಿಂದ ಮಹಿಳೆಯರು ಆರ್ಥಿಕವಾಗಿ ಮತ್ತು ಎಲ್ಲಾ ಹಂತದಲ್ಲೂ ಸಬಲೀಕರಣವಾಗಿದೆ, ಮಹಿಳಾ ಸಬಲೀಕರಣದಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ಪ್ರಸ್ತಾವನೆಗೈದ ಒಕ್ಕೂಟದ ನಿರ್ಗಮಿತ ಅಧ್ಯಕ್ಷ ಚಿದಾನಂದ ಆಚಾರ್ಯರವರು ಮಾತನಾಡಿ ನನ್ನ 6 ವರ್ಷದ ಅಧ್ಯಕ್ಷ್ಷೀಯ ಅವಧಿಯಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸುಮಾರು ೩೪ ಕಾರ್ಯಕ್ರಮಗಳನ್ನು ಎಲ್ಲರ ಸಹಕಾರದೊಂದಿಗೆ ನಡೆಸಲು ಸಾಧ್ಯವಾಗಿದೆ, ಒಕ್ಕೂಟದ ಮಾಸಿಕ ಸಭೆಯು ಕೇವಲ ಸಭೆಗೆ ಸೀಮಿತವಾಗಬಾರದೆಂದು ಪ್ರತಿ ಮಾಸಿಕ ಸಭೆಯಲ್ಲೂ ಬೇರೆ ಬೇರೆ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ನವೋದಯದ ಸದಸ್ಯರಿಗೆ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ, ಅಧ್ಯಕ್ಷತೆ ಅವಧಿಯಲ್ಲಿ ಎಲ್ಲಾ ರೀತಿಯಲ್ಲೂ ನನಗೆ ಸಹಕಾರ ನೀಡಿದ ಸರ್ವರಿಗೂ ನಾನು ಕೃತಜ್ಞನಾಗಿದ್ದೇನೆ ಎಂದು ಹೇಳಿದರು. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವಮೂರ್ತಿ ಪಿ.ಜಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸನ್ಮಾನ:
ಒಕ್ಕೂಟದ ನಿರ್ಗಮಿತ ಅಧ್ಯಕ್ಷ ಚಿದಾನಂದ ಆಚಾರ್ಯ ಸಸ್ಪೆಟ್ಟಿ ಮತ್ತು ಕಾರ್ಯದರ್ಶಿ ಹರಿಣಾಕ್ಷಿಯವರಿಗೆ ಒಕ್ಕೂಟದ ವತಿಯಿಂದ ಶಾಲು ಹಾಕಿ, ಸ್ಮರಣಿಕೆ ನೀಡಿ ಅಭಿನಂದಿಸಿ ಸನ್ಮಾನಿಸಲಾಯಿತು.

ಕಾರ್ಮಿಕ ಇಲಾಖೆಯ ಕಿಟ್ ವಿತರಣೆ:
ಕಾವು ನವೋದಯ ಒಕ್ಕೂಟದ ಸದಸ್ಯರಿಗೆ ಕಾರ್ಮಿಕ ಇಲಾಖೆಯಿಂದ ಪ್ರತಿರಕ್ಷಣಾ ಕಿಟ್ ವಿತರಿಸಲಾಯಿತು. ನವೋದಯ ಚಾರಿಟೇಬಲ್ ಟ್ರಸ್ಟ್‌ನ ಮೇಲ್ವಿಚಾರಕ ಚಂದ್ರಶೇಖರ್ ಸ್ವಾಗತಿಸಿ, ನೂತನ ಅಧ್ಯಕ್ಷ ಸುಬ್ರಾಯ ಗೌಡ ವಂದಿಸಿದರು. ಒಕ್ಕೂಟದ ಗೌರವ ಸಲಹೆಗಾರ ಅಮ್ಮು ಪೂಂಜರವರು ಕಾರ್ಯಕ್ರಮ ನಿರ್ವಹಿಸಿದರು.

 

ಅಧಿಕಾರ ಹಸ್ತಾಂತರ:
ಒಕ್ಕೂಟದ ನೂತನ ಅಧ್ಯಕ್ಷ ಸುಬ್ರಾಯ ಗೌಡ ಅಮ್ಚಿನಡ್ಕ, ಕಾರ್ಯದರ್ಶಿ ರಮೇಶ್ ಉಜ್ರುಗುಳಿ ಮತ್ತು ಉಪಾಧ್ಯಕ್ಷೆ ಸುಮತಿ ಆಚಾರಿಮೂಲೆಯವರಿಗೆ ನಿರ್ಗಮಿತ ಅಧ್ಯಕ್ಷ ಚಿದಾನಂದ ಆಚಾರ್ಯ, ಕಾರ್ಯದರ್ಶಿ ಹರಿಣಾಕ್ಷಿ, ಜತೆ ಕಾರ್ಯದರ್ಶಿ ಪುಷ್ಪಾರವರು ನಿರ್ಣಯ ಪುಸ್ತಕ ಹಸ್ತಾಂತರಿಸುವ ಮೂಲಕ ಪದಗ್ರಹಣ ಕಾರ್ಯಕ್ರಮ ನಡೆಸಲಾಯಿತು.

ರೂ.4 ಲಕ್ಷ ಲಾಭಾಂಶ ವಿತರಣೆ:
ಕಾವು ನವೋದಯ ಒಕ್ಕೂಟದ ಸ್ವಸಹಾಯ ಗುಂಪುಗಳಿಗೆ ಲಾಭಾಂಶ ವಿತರಣೆ ಮಾಡಲಾಯಿತು. ಒಕ್ಕೂಟದ ಎಲ್ಲಾ ಗುಂಪುಗಳಿಗೆ ಸೇರಿ ಒಟ್ಟು ರೂ.೪ ಲಕ್ಷದವರೆಗೆ ಲಾಭಾಂಶ ವಿತರಣೆ ಮಾಡಲಾಯಿತು.

LEAVE A REPLY

Please enter your comment!
Please enter your name here