- ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಪ್ರಶಸ್ತಿ ಪ್ರದಾನ – ವಾರ್ಷಿಕ ಮಹಾಸಭೆ
ಪುತ್ತೂರು: ಪುತ್ತೂರು ಕುಲಾಲ ಸಮಾಜ ಸೇವಾ ಸಂಘದ ವಾರ್ಷಿಕ ಕಾರ್ಯಕ್ರಮವಾಗಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ರಾಜ್ಯಮಟ್ಟದ ಕಥೆ, ಕವನ ಮತ್ತು ಪ್ರಬಂದ ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ಪ್ರದಾನ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಹಾಗೂ ವಾರ್ಷಿಕ ಮಹಾಸಭೆಯು ಮಾ.20ರಂದು ಪುತ್ತೂರು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಮುದಾಯ ಭವನದಲ್ಲಿ ಜರುಗಲಿದೆ.
ಬೆಳಿಗ್ಗೆ ಸಂಘದ ಕಚೇರಿಯಲ್ಲಿ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಪೂಜೆ, ಭಜನೆ, ಮಧ್ಯಾಹ್ನ ಮಹಾಪೂಜೆ ಜರುಗಲಿದೆ. ಬಳಿಕ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಮದಾಯ ಭವನದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಕಥೆ, ಕವನ ಮತ್ತು ಪ್ರಬಂಧ ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ಪ್ರದಾನ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ನಡೆಯಲಿದೆ. ಹಿರಿಯ ಪತ್ರಕರ್ತ ಮತ್ತು ಸಾಹಿತಿ ಚಿದಂಬರ ಬೈಕಂಪಾಡಿಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಆನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಶುಭಲತಾ ವಿದ್ಯಾರ್ಥಿವೇತನ ವಿತರಣೆ ಮಾಡಲಿದ್ದಾರೆ. ವೀರಮಂಗಲ ಸ.ಹಿ.ಪ್ರಾ.ಶಾಲೆಯ ಪ್ರಭಾರ ಮುಖ್ಯಗುರು ಹರಿಣಾಕ್ಷಿ ಸೂತ್ರಬೆಟ್ಟು, ಆನಡ್ಕ ಶಾಲೆಯ ಸಹಶಿಕ್ಷಕಿ ಮಾಲತಿ ಚರಣ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಕುಲಾಲ ಸಮಜ ಸೇವಾ ಸಂಘದ ವಾರ್ಷಿಕ ಮಹಾಸಭೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಮಹೇಶ್ ಕೆ.ಸವಣೂರು ಅವರು ತಿಳಿಸಿದ್ದಾರೆ.