ಕಾಣಿಯೂರು: ಸ್ವಚ್ಛೋತ್ಸವ- ನಿತ್ಯೋತ್ಸವ – ಸ್ವಚ್ಛತಾ ಜಾಥಾ- ಪುಸ್ತಕ ಗೂಡು ಉದ್ಘಾಟನೆ, ಪ್ಲಾಸ್ಟಿಕ್ ಬಕೆಟ್ ವಿತರಣೆ

0

  • ನಮ್ಮ ಪರಿಸರ, ಊರನ್ನು ಸ್ವಚ್ಚವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ- ನವೀನ್ ಭಂಡಾರಿ
  • ರೂ 25 ಲಕ್ಷದಲ್ಲಿ ಘನ ತ್ಯಾಜ್ಯ ಘಟಕ ನಿರ್ಮಾಣ ಕಾಮಗಾರಿ ಶೀಘ್ರದಲ್ಲಿ ಪ್ರಾರಂ- ಗಣೇಶ್ ಉದನಡ್ಕ

 

ಕಾಣಿಯೂರು: ನಮ್ಮ ಪರಿಸರ, ನಮ್ಮ ಊರನ್ನು ಸ್ವಚ್ಚವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ, ಪರಿಸರ ಸ್ವಚ್ಚ ಆಗಬೇಕು, ಆ ಮೂಲಕ ಸ್ವಚ್ಛತೆಯ ಜಾಗೃತಿ ಮೂಡಿಸಲು. ಪ್ರದೇಶದ ಸ್ವಚ್ಚತ್ತೆಗೆ ವಿಶೇಷ ಒತ್ತು ನೀಡುವ ಮೂಲಕ ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್, ಕಸ ಎಲ್ಲೆಂದರಲ್ಲಿ ಬಿಸಾಡದೇ ಸ್ವಚ್ಛತೆ ಕಡೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಅಲ್ಲದೇ ಸ್ವಚ್ಛತೆಯ ಪೂರಕವಾದ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದು ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ ಹೇಳಿದರು. ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದ.ಕ ಜಿಲ್ಲಾ ಪಂಚಾಯತ್, ಕಡಬ ತಾಲೂಕು ಪಂಚಾಯತ್, ಕಾಣಿಯೂರು ಗ್ರಾಮ ಪಂಚಾಯತ್, ಸ್ವಚ್ಛ ಭಾರತ್ ಮಿಷನ್ ಯೋಜನೆಯ ವತಿಯಿಂದ ಮಾ ೧೯ರಂದು ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾಣಿಯೂರು ಸಭಾಂಗಣದಲ್ಲಿ ನಡೆದ ಸ್ವಚ್ಛೋತ್ಸವ – ನಿತ್ಯೋತ್ಸವ ಮಾಸಾಚಾರಣೆ ಪ್ರಯುಕ್ತ ಕಾಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಾಣಿಜ್ಯ ಕಟ್ಟಡಗಳಿಗೆ ಪ್ಲಾಸ್ಟಿಕ್ ಬಕೆಟ್ ವಿತರಣೆ ಹಾಗೂ ಸ್ವಚ್ಛತ್ತಾ ಜಾಥಾ ಮತ್ತು ಪುಸ್ತಕ ಗೂಡು ಉದ್ಘಾಟಿಸಿ ಮಾತನಾಡಿದರು. ಕಾಣಿಯೂರು ಗ್ರಾ.ಪಂ. ಉಪಾಧ್ಯಕ್ಷ ಗಣೇಶ್ ಉದನಡ್ಕ ಮಾತನಾಡಿ, ಸ್ವಚ್ಛತೆಗೆ ಹೆಚ್ಚಿನ ಆಧ್ಯತೆಯನ್ನು ಗ್ರಾ.ಪಂ. ವತಿಯಿಂದ ನೀಡಲಾಗುತ್ತಿದ್ದು, ಪಂಚಾಯತ್ ವ್ಯಾಪ್ತಿಯ ಪ್ರತಿ ಅಂಗಡಿಗಳಿಗೆ ಪ್ಲಾಸ್ಟಿಕ್ ಬಕೆಟ್ ವಿತರಿಸಲಿದ್ದೇವೆ. ಎಲ್ಲೆಂದರಲ್ಲಿ ಕಸ ಬಿಸಾಡಿದರೆ ದಂಡ ವಿಧಿಸುವ ಕೆಲಸವನ್ನು ಪಂಚಾಯತ್ ಕಡೆಯಿಂದ ಮಾಡಲಿದ್ದೇವೆ ಎಂದವರು ಗ್ರಾ.ಪಂ. ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಸುಮಾರು ೨೫ ಲಕ್ಷ ಅನುದಾನ ಮಂಜೂರುಗೊಂಡಿದ್ದು, ಕೂಡಲೇ ಕಾಮಗಾರಿ ಪ್ರಾರಂಭಗೊಳ್ಳಲ್ಲಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಣಿಯೂರು ಗ್ರಾ.ಪಂ.ಅಧ್ಯಕ್ಷೆ ಲಲಿತಾ ದರ್ಖಾಸು ವಹಿಸಿದ್ದರು. ಸ್ವಚ್ಛ ಭಾರತ್ ಮಿಷನ್ ಯೋಜನೆ ಐಇಸಿ ಸಮಾಲೋಚಕರಾದ ಡೊಂಬಯ್ಯ ಇಡ್ಕಿದು ಪ್ರತಿಜ್ಞಾ ವಿಧಿ ಬೋಧಿಸಿದರು. ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆನಂದ ಗೌಡ ಮೇಲ್ಮನೆ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಉಪಾಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ, ಕಾಣಿಯೂರು ಗ್ರಾ.ಪಂ. ಕಾರ್ಯದರ್ಶಿ ದೇವರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾ.ಪಂ. ಸದಸ್ಯರುಗಳು, ಸಿ.ಎ ಬ್ಯಾಂಕ್ ನಿರ್ದೇಶಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವರ್ತಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಣಿಯೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕಮಲ್‌ರಾಜ್ ಪ್ರಾಸ್ತಾವಿಕ ಮಾತನಾಡಿದರು. ಗ್ರಾ.ಪಂ. ಸದಸ್ಯರಾದ ಪ್ರವೀಣ್‌ಚಂದ್ರ ರೈ ಕುಮೇರು ಸ್ವಾಗತಿಸಿ, ರಾಮಣ್ಣ ಗೌಡ ಮುಗರಂಜ ವಂದಿಸಿದರು. ಕಾಣಿಯೂರು ಸ.ಹಿ.ಪ್ರಾ.ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಪರಮೇಶ್ವರ ಗೌಡ ಅನಿಲ ಕಾರ್ಯಕ್ರಮ ನಿರೂಪಿಸಿದರು.

ಕೈಪಿಡಿ ಬಿಡುಗಡೆ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮಾಹಿತಿಗಳನ್ನೊಳಗೊಂಡ ಕೈಪಿಡಿಯನ್ನು ಕಾರ್ಯಕ್ರಮದಲ್ಲಿ ಅನಾವರಣಗೊಳಿಸಲಾಯಿತು.

ಸ್ವಚ್ಛತಾ ಜಾಥಾ: ಕಾರ್ಯಕ್ರಮದ ಪ್ರಾರಂಭದಲ್ಲಿ ಗ್ರಾಮ ಪಂಚಾಯತ್‌ನಿಂದ ಕಾಣಿಯೂರು ಮುಖ್ಯ ರಸ್ತೆಯಲ್ಲಿ ಸ್ವಚ್ಛತಾ ಜಾಥಾ ನಡೆಯಿತು. ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಸ್ವಚ್ಛತಾ ಜಾಥಾದಲ್ಲಿ ಪಾಲ್ಗೊಂಡರು. ಸ್ವಚ್ಛ ಭಾರತ್ ಮಿಷನ್ ಯೋಜನೆ ಐಇಸಿ ಸಮಾಲೋಚಕರಾದ ಡೊಂಬಯ್ಯ ಇಡ್ಕಿದು ಪ್ರತಿಜ್ಞಾ ವಿಧಿ ಬೋಧಿಸಿದರು.
ಪ್ಲಾಸ್ಟಿಕ್ ಬಕೆಟ್ ವಿತರಣೆ: ಕಾಣಿಯೂರು ಗ್ರಾ.ಪಂ. ವತಿಯಿಂದ ಗ್ರಾ.ಪಂ. ವ್ಯಾಪ್ತಿಯ ವಾಣಿಜ್ಯ ಕಟ್ಟಡಗಳ ಮಾಲಕರಿಗೆ ಸಾಂಕೇತಿಕವಾಗಿ ಪ್ಲಾಸ್ಟಿಕ್ ಬಕೆಟ್ ವಿತರಣೆ ಮಾಡಲಾಯಿತು.

ಪುಸ್ತಕ ಗೂಡು ಉದ್ಘಾಟನೆ; ಗ್ರಾಮೀಣ ಜನರಲ್ಲಿ ಅಕ್ಷರ ಪ್ರೀತಿ ಮೂಡಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್‌ಗಳನ್ನು ಪುಸ್ತಕ ಗ್ರಾಮಗಳಾಗಿ ಬದಲಾಯಿಸಲು ಪುಸ್ತಕ ಗೂಡು ಎಂಬ ವಿನೂತನ ಪ್ರಯೋಗವು ರಾಜ್ಯದಲ್ಲಿಯೇ ಮೊದಲ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನುಷ್ಠಾನಗೊಂಡಿದ್ದು, ಕಾಣಿಯೂರು ಗ್ರಾ.ಪಂ.ನಲ್ಲಿ ಉದ್ಗಾಟನೆಗೊಂಡಿದ್ದು, ಕಾಣಿಯೂರು ಮುಖ್ಯ ಪೇಟೆಯ ಬಸ್ಸು ತಂಗುದಾಣದಲ್ಲಿ ಪುಸ್ತಕ ಗೂಡನ್ನು ಗ್ರಾ.ಪಂ.ಅರ್ಧಯಕ್ಷೆ ಲಲಿತಾ ದರ್ಖಾಸು ಮತ್ತು ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ ಉದ್ಘಾಟಿಸಿದರು.

ಲಂಚ, ಭ್ರಷ್ಠಾಚಾರ ವಿರುದ್ಧದ ಸುದ್ದಿ ಜನಾಂದೋಲನಕ್ಕೆ ಬೆಂಬಲ:
ಲಂಚ, ಭ್ರಷ್ಟಾಚಾರದ ವಿರುದ್ಧ ಸುದ್ದಿ ಜನಾಂದೋಲನ ವೇದಿಕೆ ವತಿಯಿಂದ ನಡೆಯುತ್ತಿರುವ ಜನಾಂದೋಲನಕ್ಕೆ ಬೆಂಬಲ ವ್ಯಕ್ತಪಡಿಸಿ, ವೇದಿಕೆಯಲ್ಲಿದ್ದ ಎಲ್ಲಾ ಗಣ್ಯರು ಲಂಚ, ಭ್ರಷ್ಟಾಚಾರ ವಿರೋಧಿ ಫಲಕಗಳನ್ನು ಅನಾವರಣ ಗೊಳಿಸಿದರು.

LEAVE A REPLY

Please enter your comment!
Please enter your name here