ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಹಾಗೂ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟ ಜ.18ರಂದು ನಡೆಯಿತು.
ಪುತ್ತೂರು ಅನಘ ಅರ್ಥ್ ಮೂವರ್‍ಸ್ ಹಾಗೂ ಎಸ್‌ಆರ್ ಬಿಲ್ಡರ್‍ಸ್ ಮತ್ತು ಡೆವಲಪರ್‍ಸ್ ಇದರ ಮಾಲಕ ಶಿವಪ್ರಸಾದ್ ಐ ಇಜ್ಜಾವು ಅವರು ವಿದ್ಯಾರ್ಥಿಗಳಿಂದ ನಡೆದ ಆಕರ್ಷಕ ಪಥಸಂಚಲನದ ಗೌರವ ವಂದನೆ ಸ್ವೀಕರಿಸಿ, ಕ್ರೀಡಾಕೂಟ ಉದ್ಘಾಟಿಸಿ, ಧ್ವಜವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು ತನ್ನ ವಿದ್ಯಾರ್ಥಿ ಜೀವನವನ್ನು ನೆನಪಿಸಿಕೊಂಡು ಕ್ರೀಡೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆದ್ದರಿಂದ ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಭಾಗವಹಿಸಬೇಕು ಎಂದು ಹೇಳಿ ಶುಭಹಾರೈಸಿದರು.
ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್‌ರವರು ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಾಧಾಕೃಷ್ಣರವರು ಅತಿಥಿಗಳಿಗೆ ಹೂವು ನೀಡುವುದರ ಮೂಲಕ ಗೌರವಿಸಿದರು. ವಿದ್ಯಾರ್ಥಿನಿ ಅನ್ವಿತಾ ಎಮ್.ಹೆಚ್. ಪ್ರತಿಜ್ಞಾವಿಧಿ ಬೋಧಿಸಿದರು. ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದ ಜವಬ್ದಾರಿಯನ್ನು ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾ ರೈಯವರು ನಿರ್ವಹಿಸಿದರು. ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಸತೀಶ್ ಭಟ್ ವಂದಿಸಿದರು. ಉಪನ್ಯಾಸಕರಾದ ಸುಬ್ರಹ್ಮಣ್ಯ ಕಾರಂತ್‌ರವರು ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ, ಶಿಕ್ಷಕೇತರ ವೃಂದದವರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.