- ಬಂಟ್ವಾಳ ತಹಶೀಲ್ದಾರ್ ಆಸ್ಪತ್ರೆಗೆ ಭೇಟಿ
- ರಾಜೇಶ್ ರವರಿಂದ ಮಾಹಿತಿ ಸಂಗ್ರಹ
ವಿಟ್ಲ: ಮನೆ ಮಂಜೂರಾತಿ ವಿಚಾರದಲ್ಲಿ ಪಟ್ಟಣ ಪಂಚಾಯತ್ ಮಾಜಿ ಸದಸ್ಯರೊಬ್ಬರು ತನ್ನ ಮೇಲೆ ಲಂಚ ಕೇಳಿದ ಆರೋಪ ಹೊರಿಸಿ ಮೇಲಾಧಿಕಾರಿಗಳಿಗೆ ದೂರು ಕೊಡಿಸಿದ್ದರಿಂದ ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆತ್ನಿಸಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಟ್ಟಣ ಪಂಚಾಯತ್ ನಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ರಾಜೇಶ್ ರವರನ್ನು ವಿಟ್ಲ ಪಟ್ಟಣ ಪಂಚಾಯತ್ ನ ಆಡಳಿತಾಧಿಕಾರಿಯಾಗಿರುವ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್ ರವರು ಭೇಟಿ ಮಾಡಿ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಾಲಿನಿ, ಸಿಬ್ಬಂದಿ ಚಂದ್ರ ಶೇಖರ ವರ್ಮ, ವಿ.ಎ. ಪ್ರಕಾಶ್ ಉಪಸ್ಥಿತರಿದ್ದರು.