ವೀಕೆಂಡ್ ಕರ್ಫ್ಯೂ ಹಿಂಪಡೆತ : ರಾಜ್ಯ ಸರಕಾರದ ಮಹತ್ವದ ನಿರ್ಧಾರ

0

ಬೆಂಗಳೂರು: ಕೋವಿಡ್ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಕೋವಿಡ್ ನಿಯಂತ್ರಣ ಸಂಬಂಧ ಪ್ರಸ್ತುತ ಇರುವ ಕೊರೊನಾ ಮಾರ್ಗಸೂಚಿಗಳಲ್ಲಿ ಬದಲಾವಣೆ ಹಾಗೂ ಇತರ ನಿರ್ಧಾರಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಸಭೆಯಲ್ಲಿ ತಜ್ಞರು, ಅಧಿಕಾರಿಗಳು ಹಾಗೂ ಸಚಿವರು ಭಾಗಿಯಾಗಿದ್ದು ವಾರಾಂತ್ಯ ಕರ್ಫ್ಯೂ ನಿರ್ಧಾರವನ್ನು ಹಿಂಪಡೆಯಲಾಗಿದೆ.

ವೀಕೆಂಡ್, ನೈಟ್ ಕರ್ಫ್ಯೂಗೆ ಆಡಳಿತರೂಢ ಪಕ್ಷ, ವಿರೋಧ ಪಕ್ಷದ ಹಲವು ನಾಯಕರು, ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿತ್ತು. ಈ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ತೆರವಿಗೆ ತಜ್ಞರು ಶಿಫಾರಸು ಮಾಡಿದ್ದರು.

LEAVE A REPLY

Please enter your comment!
Please enter your name here