ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡಿಸಿ, ಸಿಇಒ ಭೇಟಿ

0

 

ನೆಲ್ಯಾಡಿ: ಕೋವಿಡ್ ಲಸಿಕಾಕರಣದ ಪ್ರಗತಿ ಪರಿಶೀಲನೆಗಾಗಿ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹಾಗೂ ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್‌ರವರು ಜ.2`1ರಂದು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಕೆಲವು ನಿರ್ದೇಶನಗಳನ್ನು ನೀಡಿದರು.


ಮೊದಲ ಡೋಸ್ ಲಸಿಕೆ ಪಡೆಯದೆ ಬಾಕಿಯಾಗಿರುವವರಿಗೆ ಲಸಿಕೆ ನೀಡಲು ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಎರಡನೇ ಡೋಸ್ ಲಸಿಕೆ ಪಡೆಯದವರನ್ನು ಪತ್ತೆ ಮಾಡಿ ಅವರಿಗೆ ಲಸಿಕೆ ನೀಡಬೇಕೆಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯವರಿಗೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು. ನೆಲ್ಯಾಡಿ ವ್ಯಾಪ್ತಿಯಲ್ಲಿನ ಕೋವಿಡ್ ಸೋಂಕಿತ ವ್ಯಕ್ತಿಗಳ ಸಂಪರ್ಕಿತರ ಪತ್ತೆ ಕಾರ್ಯ ಮಾಡಬೇಕು ಹಾಗೂ ಅವರು ಹೋಂ ಐಸೊಲೇಶನ್‌ನಲ್ಲಿರುವ ಬಗ್ಗೆ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿಯವರು ಸೂಚನೆ ನೀಡಿದರು. ಪ್ರಾಥಮಿಕ ಆರೋಗ್ಯ ವೈದ್ಯಾಧಿಕಾರಿ ಡಾ.ಶಿಶಿರರವರು ಮಾಹಿತಿ ನೀಡಿದರು. ಕಡಬ ತಹಶೀಲ್ದಾರ್ ಅನಂತಶಂಕರ, ಕಂದಾಯ ನಿರೀಕ್ಷಕ ಅವಿನ್ ರಂಗತಮಲೆ, ನೆಲ್ಯಾಡಿ ಗ್ರಾ.ಪಂ.ಪಿಡಿಒ ಮಂಜುಳ ಎನ್., ಕೌಕ್ರಾಡಿ ಗ್ರಾ.ಪಂ.ಪಿಡಿಒ ಮಹೇಶ್ ಜಿ.ಎನ್., ನೆಲ್ಯಾಡಿ ಗ್ರಾಮಕರಣಿಕೆ ಅಶ್ವಿನಿ, ಕೌಕ್ರಾಡಿ ಗ್ರಾಮಕರಣಿಕ ಸಿದ್ಧಲಿಂಗರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here