ಪುತ್ತೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ೨೦೨೦-೨೧ ನೇ ಸಾಲಿನಲ್ಲಿ ಅತೀ ಹೆಚ್ಚು ಮಾರಾಟ ಮಾಡಿರುವ ಏಜೆನ್ಸಿಯಲ್ಲಿ ಕುಂಬ್ರ ಮೆಲ್ವಿನ್ ಮೊಂತೆರೋರವರು ತಾಲೂಕು ಮಟ್ಟದ ಉತ್ತಮ ಡೀಲರಾಗಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ ಜ.25 ರಂದು ಮಂಗಳೂರಿನಲ್ಲಿ ನಡೆದ ಡೀಲರ್ಗಳಿಗೆ ಅಭಿನಂದನಾ ಸಭೆಯಲ್ಲಿ ಮೆಲ್ವಿನ್ ಮೊಂತೆರೊರವರಿಗೆ ಪ್ರಶಸ್ತಿ ಪತ್ರ ಹಾಗೂ ಪುರಸ್ಕಾರ ನೀಡಿ ಗೌರವಿಸಲಾಯಿತು.ಒಕ್ಕೂಟದ ಅಧಿಕೃತ ಡೀಲರ್ ಆಗಿ ಕಳೆದ ಹಲವ ವರ್ಷಗಳಿಂದ ಕುಂಬ್ರದಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದಾರೆ. ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆಯವರು ಪ್ರಶಸ್ತಿ ಪತ್ರ ಹಾಗೂ ಪುರಸ್ಕಾರ ನೀಡಿ ಗೌರವಿಸಿದರು. ಒಕ್ಕೂಟದ ನಿರ್ದೇಶಕರಾದ ಎಸ್.ಬಿ.ಜಯರಾಮ ರೈ ಬಳಜ್ಜ, ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು ಮತ್ತಿತರರು ಉಪಸ್ಥಿತರಿದ್ದರು.