ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

0

  • ಶಿಕ್ಷಿತರೇ ಭ್ರಷ್ಟರಾಗುತ್ತಿರುವುದು ಶಿಕ್ಷಣದ ಸೋಲು : ಮೂಲಚಂದ್ರ

ಪುತ್ತೂರು: ಇಂದು ಸುಶಿಕ್ಷಿತರೆನಿಸಿಕೊಂಡವರೇ ಲಂಚಗುಳಿತನ, ಭ್ರಷ್ಟಚಾರದಲ್ಲಿ ತೊಡಗಿಕೊಂಡಿರುವುದನ್ನು ಕಾಣುತ್ತಿದ್ದೇವೆ. ಚೆನ್ನಾಗಿ ಶಿಕ್ಷಣ ಪಡೆದವರೇ ಇಂತಹ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತಾರೆಂದರೆ ಕಲಿತ ಶಿಕ್ಷಣಕ್ಕೇನು ಮೌಲ್ಯವಿದೆ ಎಂಬುದನ್ನು ನಾವು ಪ್ರಶ್ನಿಸಿಕೊಳ್ಳಬೇಕಿದೆ. ಹಾಗೆಯೇ ಆ ಪ್ರಶ್ನೆಗೆ ಉತ್ತರವಾಗಿ ನಾವು ಬೆಳೆಯಬೇಕಾದ ಅವಶ್ಯಕತೆ ಇದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಮೂಲಚಂದ್ರ ಹೇಳಿದರು.

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್‌ನಲ್ಲಿ ನಡೆದ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಧ್ವಜಾರೋಹಣಗೈದು ಬುಧವಾರ ಮಾತನಾಡಿದರು.

ಇಡಿಯ ಜಗತ್ತಿಗೆ ಮಾನವತೆಯನ್ನು ಬೋಧಿಸಿದ ರಾಷ್ಟ್ರ ನಮ್ಮದು. ಆದರೆ ನಮಗೇ ಇಂದು ದೇಸೀಯತೆ, ಮಾನವತಾವಾದಿ ಶಿಕ್ಷಣದ ಅವಶ್ಯಕತೆಯಿದೆ. ನಮ್ಮತನ ತೋರುವ, ನಮ್ಮ ಹಿನ್ನೆಲೆಯನ್ನು ತಿಳಿಸುವ ಹಾಗೂ ನಮ್ಮ ಜವಾಬ್ದಾರಿ ಏನೆಂಬುದನ್ನು ಹೇಳುವ ಶಿಕ್ಷಣ ಬೇಕಾಗಿದೆ. ನಮ್ಮ ದೇಶದಲ್ಲಿ ಏಕಮುಖಿ ಪ್ರಯತ್ನದ ತೀವ್ರ ಕೊರತೆ ಕಂಡುಬರುತ್ತಿದೆ. ಪ್ರತಿಯೊಬ್ಬರೂ ಮತ್ತೊಬ್ಬರಿಗೆ ವಿರುದ್ಧವಾಗಿ ಶ್ರಮವನ್ನು ವ್ಯಯಿಸುತ್ತಿರುವುದೇ ನಮ್ಮ ಬಹುದೊಡ್ಡ ಸಮಸ್ಯೆಯಾಗಿದೆ. ಇದನ್ನು ಮೀರಿನಿಂತು ಭಾರತವನ್ನು ಬೆಳೆಸಬೇಕಿದೆ. ಇತ್ತೀಚೆಗಿನ ವರ್ಷಗಳಲ್ಲಿ ಅಂತಹ ಪ್ರಯತ್ನಗಳಾಗುತ್ತಿರುವುದು ಸ್ವಾಗತಾರ್ಹ ಎಂದರು.

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಅಂಬಿಕಾ ಪದವಿ ಮಹಾವಿದ್ಯಾಲಯದ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಕಾಂತ ಗೋರೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉದ್ಯಮಿ ಮಣಿಲ ಸುಬ್ಬಣ್ಣ ಶಾಸ್ತ್ರಿ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ್ ಕುಮಾರ್ ಕಮ್ಮಜೆ, ಕ್ಯಾಂಪಸ್ ನಿರ್ದೇಶಕ ಭಾಸ್ಕರ ಶೆಟ್ಟಿ, ಅಂಬಿಕಾ ಪದವಿ ಕಾಲೇಜಿನ ಪ್ರಾಚಾರ್ಯ ಡಾ.ವಿನಾಯಕ ಭಟ್ಟ ಗಾಳಿಮನೆ, ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಶಂಕರನಾರಾಯಣ ಭಟ್, ಅಂಬಿಕಾ ವಿದ್ಯಾಲಯದ ಉಪಪ್ರಾಂಶುಪಾಲೆ ಸುಜನಿ ಬೋರ್ಕರ್, ಬೋಧಕ ಮತ್ತು ಬೋಧಕೇತರ ವೃಂದ, ವಿದ್ಯಾರ್ಥಿಗಳು ಹಾಜರಿದ್ದರು. ಅಂಬಿಕಾ ವಿದ್ಯಾಲಯದ ಪ್ರಾಚಾರ್ಯೆ ಮಾಲತಿ ಡಿ ಸ್ವಾಗತಿಸಿ, ಶಿಕ್ಷಕಿ ಸುಜಯಾ ವಂದಿಸಿದರು.

LEAVE A REPLY

Please enter your comment!
Please enter your name here