ನೆಲ್ಯಾಡಿ: ಶಿರಾಡಿ ಗ್ರಾಮದ ಕಳಪ್ಪಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಮತ್ತು ಮೂಲಸ್ಥಾನ ಶಿರಾಡಿ ದೈವಸ್ಥಾನ ಇಲ್ಲಿನ ಕಳಪ್ಪಾರು ಮೂಲಸ್ಥಾನ ಶ್ರೀ ಶಿರಾಡಿ, ರುದ್ರಾಂಡಿ ಹಾಗೂ ಪರಿವಾರ ದೈವಗಳ ಪುನ: ಪ್ರತಿಷ್ಟಾ ಬ್ರಹ್ಮಕಲಶೋತ್ಸವ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಜ.೨೫ ಮತ್ತು ೨೬ರಂದು ನಡೆಯಿತು.
ಜ.೨೫ರಂದು ಸಂಜೆ ಗ್ರಾಮಸ್ಥರಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ, ರಾತ್ರಿ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪ್ರಾಸಾದ ಪರಿಗ್ರಹ, ಸ್ವಸ್ತಿ ಪುಣ್ಯಾಹ ವಾಚನ, ಸ್ಥಳಶುದ್ಧಿ, ರಕ್ಷೆಘ್ನ ಹೋಮ, ವಾಸ್ತುಹೋಮ, ವಾಸ್ತುಪೂಜಾ ಬಲಿ, ಅನ್ನಸಂತರ್ಪಣೆ ನಡೆಯಿತು. ಜ.೨೬ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಆಶ್ಲೇಷ ಬಲಿ, ಬ್ರಹ್ಮಕಲಶ ಪೂಜೆ ನಡೆದು ೮.೨೯ರಿಂದ ೯.೧೫ರ ಕುಂಭ ಲಗ್ನ ಶುಭ ಮುಹೂರ್ತದಲ್ಲಿ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ಪ್ರತಿಷ್ಟೆ, ಬ್ರಹ್ಮಕಲಶಾಭಿಷೇಕ, ತಂಬಿಲ ಸೇವೆ, ಮಂಗಳಾರತಿ, ಅನ್ನಸಂತರ್ಪಣೆ ನಡೆಯಿತು. ಅನುವಂಶಿಕ ಮೊಕ್ತೇಸರ ಬಾಲಕೃಷ್ಣ ಗೌಡ ಕೆ.ಸಿ., ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿವಾಕರ ಗೌಡ ಶಿರಾಡಿ, ಉಪಾಧ್ಯಕ್ಷರಾದ ಲೋಕಯ್ಯ ಗೌಡ ಕುದ್ಕೋಳಿ, ಮಧುಕುಮಾರ್, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಗೌಡ ಕುದ್ಕೋಳಿ, ಖಜಾಂಜಿ ಸುಬ್ರಹ್ಮಣ್ಯ ತೋಡ್ತಿಲ್ಲಾಯ, ಆಡಳಿತ ಸಮಿತಿ ಅಧ್ಯಕ್ಷ ಡೊಂಬಯ್ಯ ಗೌಡ ಕೆ., ಉಪಾಧ್ಯಕ್ಷ ಡಿ.ಆರ್.ನಾರಾಯಣ ಗೌಡ ಶಿರಾಡಿ, ಪ್ರಧಾನ ಕಾರ್ಯದರ್ಶಿ ಧನಂಜಯ ಗೌಡ ಬರಮೇಲು, ಉತ್ಸವ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಪಿ.ಎನ್.ಪೆಲತ್ತಡಿ, ಪ್ರಧಾನ ಕಾಪ ನಾರಾಯಣ ಕಾಪ, ಕಳಪ್ಪಾರು ಗುತ್ತು ಮತ್ತು ನಾಲ್ವೇಕಿಯವರು, ಪರಿಚಾರಕರು, ವಿವಿಧ ಸಮಿತಿಯ ಸದಸ್ಯರು, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.