ಪುತ್ತೂರು: ಇತ್ತೀಚೆಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಮೈ ಮಹಾಲಿಂಗ ನಾಯ್ಕ ಅವರಿಗೆ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಎಸ್ಟಿ ಮೋರ್ಚಾದ ವತಿಯಿಂದ ಅವರ ಸ್ವಗೃಹದಲ್ಲಿ ಅಭಿನಂದನೆ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥರವರ ದಿವ್ಯ ಹಸ್ತದಿಂದ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹರೀಶ್ ಬಿಜತ್ರೆ, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಎಸ್ಟಿ ಮೋರ್ಚಾ ಅಧ್ಯಕ್ಷ ಶಿವಪ್ಪ ನಾಯ್ಕ ಪೆರ್ನೆ, ಪ್ರಧಾನ ಕಾರ್ಯದರ್ಶಿಗಳಾದ ಹರೀಶ್ ನಾಯ್ಕ ದರ್ಬೆ, ನಾರಾಯಣ ನಾಯ್ಕ ಚಾಕೋಟೆ, ಉಪಾಧ್ಯಕ್ಷರಾದ ಭಾಸ್ಕರ ಕೋಡಂದೂರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಜಯಶ್ರೀ ಕೋಡಂದೂರು, ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಯಶಸ್ವಿನಿ ಶಾಸ್ತ್ರೀ ಸೇರಿದಂತೆ ಊರಿನ ಪ್ರಮುಖರು ಉಪಸ್ಥಿತರಿದ್ದರು.