ಸಬಳೂರು ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ

0

ಕಡಬ: ಪಠ್ಯೇತರ ಚಟುವಟಿಕೆಗೆ ಒತ್ತು ನೀಡುವ ಸಲುವಾಗಿ ಕಲಿಕ ಉತ್ಸವದಂತಹ ಕಾರ್ಯಕ್ರಮಕ್ಕೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಇಂತಹ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಿಸಿ ಪ್ರತಿಯೊಬ್ಬ ವಿದ್ಯಾರ್ಥಿಯು ಪಾಲ್ಗೊಳ್ಳುವಂತೆ ಶಿಕ್ಷಕರೊಂದಿಗೆ ಪಾಲಕರು ಮುತುವರ್ಜಿವಹಿಸಬೇಕು ಎಂದು ರಾಮಕುಂಜ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ ಹೇಳಿದರು.

ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ರಾಮಕುಂಜ ಹಾಗೂ ಸಬಳೂರು ಸರಕಾರಿ ಉ.ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಸಬಳೂರು ಶಾಲೆಯಲ್ಲಿ ಎರಡು ದಿನಗಳ ಕಾಲ ನಡೆಯುವ ಕಲಿಕಾ ಹಬ್ಬವನ್ನು ಜ.31ರಂದು ಉದ್ಘಾಟಿಸಿ ಮಾತನಾಡಿದರು. ಕೊಯಿಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರ್ಷಿತ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ರಾಮಕುಂಜ ಪಿಡಿಓ ಜೆರಾಲ್ಡ್ ಮೆಸ್ಕರೇನಸ್, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲಾ ಮುಖ್ಯಗುರು ಸತೀಶ್ ಭಟ್, ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲಾ ಕಾರ್ಯದರ್ಶಿ ಸೇಸಪ್ಪ ರೈ, ಕಲಿಕಾ ಉತ್ಸವ ನೋಡೇಲ್ ಅಧಿಕಾರಿ ಶ್ರೀಧರ್ ಭಟ್ ಶುಭಹಾರೈಸಿದರು.

ಸಬಳೂರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶೇಖರ ಗೌಡ ಕೊಲ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಗೌಡ ಎರ್ಮಡ್ಕ, ರಾಮಕುಂಜ ಸರಕಾರಿ ಹಿ.ಪ್ರಾ.ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಅಬ್ದುಲ್ ಕರೀಂ, ಕೊಯಿಲ ಗ್ರಾಮ ಪಂಚಾಯಿತಿ ಸದಸ್ಯರಾದ ಭಾರತಿ, ಶಶಿಕಲಾ, ವಿದ್ಯಾರ್ಥಿ ನಾಯಕಿ ದರ್ಶಿನಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಗೋಳಿತ್ತಡಿ-ಏಣಿತ್ತಡ್ಕ ರಸ್ತೆಯ ತ್ರೀವೇಣಿ ಸರ್ಕಲ್ ಬಳಿಯಿಂದ ಶಾಲೆಯ ತನಕ ವಿದ್ಯಾರ್ಥಿಗಳ ಮೆರವಣಿಗೆ ನಡೆಯಿತು. ಎಸ್‌ಡಿಎಂಸಿ ಅಧ್ಯಕ್ಷ ಶೇಖರ ಗೌಡ ಕೊಲ್ಯ ತೆಂಗಿನಕಾಯಿ ಒಡೆದು ಮೆರವಣಿಗೆಗೆ ಚಾಲನೆ ನೀಡಿದರು. ಸಿಆರ್‌ಪಿ ಮಹೇಶ್ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮುಖ್ಯಗುರು ವಾರಿಜಾ ಬಿ ವಂದಿಸಿದರು. ಶಿಕ್ಷಕ ವೆಂಕಟೇಶ್ ನಿರೂಪಿಸಿದರು.

LEAVE A REPLY

Please enter your comment!
Please enter your name here