ಪುತ್ತೂರು: ಇತಿಹಾಸ ಪ್ರಸಿದ್ಧ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ, ಜಾತ್ರೋತ್ಸವ ಫೆ.4 ರಂದು ರಾತ್ರಿ ನಡೆಯಲಿದೆ.
ಬೆಳಿಗ್ಗೆ ಕಾರ್ಜಾಲು ಗುತ್ತಿನಲ್ಲಿ ಸ್ಥಳಶುದ್ಧಿ ಹೋಮ, ಕಲಶ ಪ್ರತಿಷ್ಠೆ, ನಂತರ ಶ್ರೀ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ, ನಾಗತಂಬಿಲ, ಮಧ್ಯಾಹ್ನ ಶ್ರೀ ದೈವಸ್ಥಾನದ ಬಳಿ ಶ್ರೀ ದೈವಗಳ ಭಂಡಾರದ ವತಿಯಿಂದ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಶೀ ದೈವಗಳ ಮೂಲನೆಲೆ ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಡುವುದು. ದೈವಸ್ಥಾನದಲ್ಲಿ ಗೋಂದಲು ಪೂಜೆ ನಡೆದು ರಾತ್ರಿ ಗಂಟೆ 12ಕ್ಕೆ ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ನಡೆಯಲಿದೆ. ಭಕ್ತಾದಿಗಳು ನೇಮೋತ್ಸವದಲ್ಲಿ ಪಾಲ್ಗೊಂಡು ದೈವಗಳ ಕೃಪೆಗೆ ಪಾತ್ರರಾಗಬೇಕೆಂದು ದೈವಸ್ಥಾನದ ಆಡಳಿತ ಮಂಡಳಿ ವಿನಂತಿಸಿದೆ.
ಸುದಾನ ಶಾಲಾ ಮೈದಾನದಲ್ಲಿ ವಾಹನ ಪಾರ್ಕಿಂಗ್ ಸೌಲಭ್ಯ
ಜಾತ್ರೋತ್ಸವ ಸಂದರ್ಭದಲ್ಲಿ ವಾಹನ ದಟ್ಟನೆ ನಿಯಂತ್ರಿಸಲು ಭಕ್ತರು ತಮ್ಮ ವಾಹನಗಳನ್ನು ಸುದಾನ ವಸತಿಯುತ ಶಾಲೆಯ ಮೈದಾನದಲ್ಲಿ ಪಾರ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ.