ನರಿಮೊಗರು ಪ್ರಾ.ಕೃ.ಪ.ಸ ಸಂಘದ ಉಪಾಧ್ಯಕ್ಷರಾಗಿ ಲತಾ ಮೋಹನ್ ಅವಿರೋಧ ಆಯ್ಕೆ

0

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದ ಹೊನ್ನಪ್ಪ ಪೂಜಾರಿ ಕೈಂದಾಡಿಯವರು ತಮ್ಮ ಉಪಾಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದರು. ಉಪಾಧ್ಯಕ್ಷರಾಗಿ ನಿರ್ದೇಶಕಿ ಲತಾ ಮೋಹನ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಫೆ.2ರಂದು ಸಂಘದ ಕಚೇರಿಯಲ್ಲಿ ಸಂಘದ ಚುನಾವಣಾಧಿಕಾರಿಯವರ ಸಮ್ಮುಖದಲ್ಲಿ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆಯಿತು.

 

ಸಂಘದ ವತಿಯಿಂದ ಲತಾ ಮೋಹನ್ ಅವರಿಗೆ ಶಾಲು ಹೊದಿಸಿ, ಹೂಗುಚ್ಚ ನೀಡಿ ಅಭಿನಂದಿಸಲಾಯಿತು. ಸಂಘದ ಅಧ್ಯಕ್ಷ ಬಾಬು ಶೆಟ್ಟಿ ವೀರಮಂಗಲ ಹಾಗೂ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕರ ಎಚ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here