ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ಮಹಾಲಿಂಗೇಶ್ವರ ಸಂಜೀವಿನಿ ಒಕ್ಕೂಟದ 30 ಸದಸ್ಯರಿಗೆ ನಬಾರ್ಡ್, ಭಾರತೀಯ ವಿಕಾಸ ಟ್ರಸ್ಟ್ ಹಾಗೂ ತಾಲೂಕು ಅಭಿಯಾನ ನಿರ್ವಹಣಾ ಘಟಕ ತಾಲೂಕು ಪಂಚಾಯತ್ ಪುತ್ತೂರು ಇದರ ಸಹಯೋಗದೊಂದಿಗೆ ಸೂಕ್ಷ್ಮವಲಯ ಅಭಿವೃದ್ಧಿ ಘಟಕ ಯೋಜನೆಯಡಿ ಸ್ವ ಉದ್ಯೋಗ ತರಬೇತಿ ಕಾರ್ಯಾಗಾರವನ್ನು ಕೋಡಿಂಬಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ತೆಂಗಿನ ಉಪ ಉತ್ಪನ್ನದ ಕರಕುಶಲ ಅಲಂಕಾರಿಕ ವಸ್ತುಗಳ ತಯಾರಿಕಾ ತರಬೇತಿ ಆಯೋಜಿಸಲಾಗಿದ್ದು ದ.ಕ. ಜಿಲ್ಲಾ ಪಂಚಾಯತ್ ಕಾರ್ಯಕ್ರಮ ವ್ಯವಸ್ಥಾಪಕರು, ಪುತ್ತೂರು ತಾಲೂಕು ಪಂಚಾಯತ್ ಕಾರ್ಯಕ್ರಮ ವ್ಯವಸ್ಥಾಪಕರು, ಭಾರತೀಯ ವಿಕಾಸ್ ಟ್ರಸ್ಟ್ ಕಾರ್ಯಕ್ರಮ ವ್ಯವಸ್ಥಾಪಕರು, ಗ್ರಾಮ ಪಂಚಾಯತ್ ಪಿ.ಡಿ.ಓ, ಅಧ್ಯಕ್ಷರು, GPLF ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ತರಬೇತಿ ಫೆ.1ರಂದು ತರಬೇತಿ ಆರಂಭಗೊಂಡಿದ್ದು ಫೆ. 10ರವರೆಗೆ ನಡೆಯಲಿದೆ.