ಸಿ ಎ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

0

ಪುತ್ತೂರು: ಭಾರತೀಯ ಚಾರ್ಟಡ್ ಅಕೌಂಟೆಂಟ್ಸ್ ಸಂಸ್ಥೆ ಕಳೆದ ಡಿಸೆಂಬರ್‌ನಲ್ಲಿ ನಡೆಸಿದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ 2020-22ನೇ ಸಾಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ತೇರ್ಗಡೆಯಾಗುವುದರ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳಾದ ದೀಪ್ನಾ ಜೆ(ಕಾಸರಗೋಡಿನ ಮುಂಡಿತ್ತಡ್ಕದ ಎಸ್. ನಾರಾಯಣ ಮತ್ತು ಪುಷ್ಪ ಕೆ ದಂಪತಿ ಪುತ್ರಿ) ಮತ್ತು ಪೂರ್ವಿಕ್ ಸಿ ಎಸ್(ಕೊಡಗಿನ ಸೋಮವಾರಪೇಟೆಯ ಸುಬ್ರಹ್ಮಣ್ಯ ಸಿ ಕೆ ಮತ್ತು ವೀಣಾ ಸಿ ಎಸ್ ದಂಪತಿ ಪುತ್ರ) ತೇರ್ಗಡೆಯಾಗುವುದರ ಮೂಲಕ ಮುಂದಿನ ಹಂತದ ಸಿ ಎ ಇಂಟರ್‌ಮಿಡಿಯೆಟ್ ಪರೀಕ್ಷೆಯನ್ನು ಬರೆಯಲು ಅರ್ಹತೆ ಗಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
ಕಳೆದ ಹತ್ತು ವರ್ಷಗಳಿಂದ ಸಿಎ ಆಕಾಂಕ್ಷಿಗಳಿಗೆ ವಿಶೇಷ ತರಬೇತಿ ವ್ಯವಸ್ಥೆಯನ್ನು ಕಾಲೇಜಿನ ವತಿಯಿಂದ ಕಲ್ಪಿಸಿಕೊಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಷಯದ ಜೊತೆಗೆ ಸಿಎ ಪರೀಕ್ಷೆಗೆ ಬೇಕಾದ ಸಕಲ ತರಬೇತಿ ಕಾರ್ಯವನ್ನೂ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಸಿಕೊಂಡು ಬರಲಾಗುತ್ತಿದೆ.

LEAVE A REPLY

Please enter your comment!
Please enter your name here