ಪುತ್ತೂರು:ದ.ಕ.ಜಿಲ್ಲೆಯಲ್ಲಿ ನಡೆಯಲಿರುವ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮವವನ್ನು ಉತ್ತಮವಾಗಿ ಯಶಸ್ವಿಗೊಳಿಸಲು ಜಿಲ್ಲಾ ಸಂಯೋಜಕರು, ಸಹ ಸಂಯೋಜಕರು ಮತ್ತು ವಿಧಾನ ಸಭಾ ಕ್ಷೇತ್ರವಾರು ಉಸ್ತುವಾರಿಗಳನ್ನು ನಿಯೋಜಿಸಲಾಗಿದೆ.
ಮಾಜಿ ಸಚಿವ ಅಭಯಚಂದ್ರ ಜೈನ್ ಅವರನ್ನು ಜಿಲ್ಲಾ ಸಂಯೋಜಕರಾಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ಅವರನ್ನು ಜಿಲ್ಲಾ ಸಹಸಂಯೋಜಕರಾಗಿ ನಿಯೋಜಿಸಲಾಗಿದೆ.ವಿಧಾನ ಸಭಾ ಕ್ಷೇತ್ರವಾರು ಉಸ್ತುವಾರಿಗಳನ್ನೂ ನಿಯೋಜಿಸಲಾಗಿದ್ದು ಪುತ್ತೂರು ವಿಧಾನ ಸಭಾ ಕ್ಷೇತ್ರದ ಉಸ್ತುವಾರಿಯಾಗಿ ಮಾಜಿ ಶಾಸಕ ಜೆ.ಆರ್.ಲೋಬೋ,ಸುಳ್ಯ ವಿಧಾನ ಸಭಾ ಕ್ಷೇತ್ರಕ್ಕೆ ಮಾಜಿ ಶಾಸಕಿ ಶ್ರೀಮತಿ ಶಕುಂತಳಾ ಟಿ.ಶೆಟ್ಟಿಯವರನ್ನು ಉಸ್ತುವಾರಿಯಾಗಿ ನಿಯೋಜಿಸಲಾಗಿದೆ.ಜಿಲ್ಲೆಯ ಉಳಿದ ವಿಧಾನ ಸಭಾ ಕ್ಷೇತ್ರಗಳಲ್ಲಿ ಬೆಳ್ತಂಗಡಿಗೆ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಬಂಟ್ವಾಳಕ್ಕೆ ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹಿಂ, ಮೂಡಬಿದ್ರೆಗೆ ಮಾಜಿ ಮೇಯರ್ ಮಹಾಬಲ ಮಾರ್ಲ, ಮಂಗಳೂರುಗೆ ಮಾಜಿ ಮೇಯರ್ ಶ್ರೀಮತಿ ಕವಿತಾ ಸನಿಲ್, ಮಂಗಳೂರು ದಕ್ಷಿಣಕ್ಕೆ ಮಾಜಿ ಶಾಸಕ ಮೊಹಿದ್ದೀನ್ ಬಾವ ಹಾಗೂ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿ’ಸೋಜ ಅವರನ್ನು ಪ್ರಜಾಧ್ವನಿ ಉಸ್ತುವಾರಿಯಾಗಿ ನಿಯೋಜಿಸಲಾಗಿದೆ ಎಂದು ಕರ್ನಾಟಕ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ತಿಳಿಸಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರ ಶಿಫಾರಸ್ಸಿನ ಮೇರೆಗೆ, ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಹಾಗೂ ಕರಾವಳಿ ಕರ್ನಾಟಕದ ಸಂಚಾಲಕರಾಗಿರುವ ಬಿ.ಕೆ.ಹರಿಪ್ರಸಾದ್‌ರವರ ಅನುಮತಿಯೊಂದಿಗೆ ಇವರುಗಳನ್ನು ನಿಯೋಜಿಸಲಾಗಿದೆ ಎಂದು ಮಂಜುನಾಥ ಭಂಡಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.