ಗಾಂಜಾ ಪ್ರಕರಣ:ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0

ಪುತ್ತೂರು:2009 ರಲ್ಲಿ ನಡೆದ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ಕಳೆದ 5 ವರ್ಷಗಳಿಂದ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.


ಬಂಟ್ವಾಳ ನರಿಂಗಾನ ನಿವಾಸಿ ಮೊಹಮ್ಮದ್ ಬಶೀರ್ ಬಂಧಿತ ಆರೋಪಿ.2009 ರಲ್ಲಿ ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಆರೋಪಿ ಬಶೀರ್ ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು.ನ್ಯಾಯಾಲಯ ಆರೋಪಿ ವಿರುದ್ಧ ವಾರಂಟ್ ಜಾರಿ ಮಾಡಿತ್ತು. ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮಾರ್ಗದರ್ಶನದಂತೆ ಹೆಡ್‌ಕಾನ್‌ಸ್ಟೇಬಲ್ ಪರಮೇಶ್ವರ ಮತ್ತು ಕುಮಾರ್ ಹಾಗು ಪ್ರಭು ನಾಯಕ್ ಅವರು ಆರೋಪಿಯನ್ನು ಪುತ್ತೂರು ಬಸ್ ನಿಲ್ದಾಣದಿಂದ ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here