ಸಿಎಲ್‌ಸಿಯಿಂದ ಫಿಲೋಮಿನಾ ಕ್ರೀಡಾಂಗಣದಲ್ಲಿ 30ನೇ ವರ್ಷದ ಓವರ್ ಆರ್ಮ್ ಮೊ|ಪತ್ರಾವೋ ಅಂತರ್-ವಾಳೆ ಕ್ರಿಕೆಟ್ ಉದ್ಘಾಟನೆ

0

ಸಾಮಾಜಿಕ ಚಟುವಟಿಕೆಗಳಲ್ಲಿ ದ.ಕ ಜಿಲ್ಲೆಯಲ್ಲಿಯೇ ಮುಂಚೂಣಿ ಘಟಕವಾಗಿ ಸಿ.ಎಲ್.ಸಿ ಸಂಸ್ಥೆ ಗುರುತಿಸಿಕೊಂಡಿದೆ-ದೀಪಕ್ ಮಿನೇಜಸ್

ಚಿತ್ರ: ಸಂತೋಷ್ ಮೊಟ್ಟೆತ್ತಡ್ಕ

ಪುತ್ತೂರು: ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಮುಂದಿರುವ ಸಿ.ಎಲ್.ಸಿ ಸಂಸ್ಥೆಯು ದ.ಕ ಜಿಲ್ಲೆಯಲ್ಲಿಯೇ ಮುಂಚೂಣಿಯ ಘಟಕವಾಗಿ ಗುರುತಿಸಿಕೊಳ್ಳುವ ಮೂಲಕ ಪ್ರಸಿದ್ಧಿ ಪಡೆದಿರುವುದು ಮಾತ್ರವಲ್ಲ ಅದು ಶಕ್ತಿಯುತವಾಗಿ ಬೆಳೆಯುತ್ತಿದೆ ಎಂದು ಪುತ್ತೂರು ಪೊಲೀಸ್ ಠಾಣೆಯ ಬಳಿ ವ್ಯವಹರಿಸುತ್ತಿರುವ ಸೋಜಾ ಮೆಟಲ್ ಮಾರ್ಟ್ ಮಾಲಕ ದೀಪಕ್ ಮಿನೇಜಸ್ ರವರು ಹೇಳಿದರು.


ಮಾಯಿದೆ ದೇವುಸ್ ಚರ್ಚ್ ಅಧೀನದಲ್ಲಿರುವ ಕ್ರಿಶ್ಚಿಯನ್ ಲೈಫ್ ಕಮ್ಯೂನಿಟಿ(ಸಿಎಲ್‌ಸಿ) ಸಂಸ್ಥೆಯ ವತಿಯಿಂದ ‘ಒಗ್ಗಟ್ಟಿಗಾಗಿ ಕ್ರೀಡೆ’ ಎಂಬ ಧ್ಯೇಯವಾಕ್ಯದಡಿಯಲ್ಲಿ ವರ್ಷಂಪ್ರತಿ ಹಮ್ಮಿಕೊಳ್ಳುವ ಮೊ|ಆಂಟನಿ ಪತ್ರಾವೋ ಸ್ಮರಣಾರ್ಥ 30ನೇ ವರ್ಷದ ಅಂತರ್-ವಾಳೆ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟವು ಫೆ.5 ರಂದು ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜ್‌ನ ಕ್ರೀಡಾಂಗಣದಲ್ಲಿ ಜರಗಿದ್ದು, ಈ ಕ್ರೀಡಾಕೂಟದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ನಾನೂ ಕೂಡ ಸಿ.ಎಲ್.ಸಿ ಸಂಸ್ಥೆಯ ಸದಸ್ಯನೆಂದು ಹೇಳಲು ಹೆಮ್ಮೆ ಎನಿಸುತ್ತಿದೆ. ಈ ನಿಟ್ಟಿನಲ್ಲಿ ಸಿ.ಎಲ್.ಸಿ ಸಂಸ್ಥೆಯು ಆಯೋಜಿಸುತ್ತಿರುವ ಈ ಕ್ರಿಕೆಟ್ ಪಂದ್ಯಾಟದ ಮುಖ್ಯ ಉದ್ಧೇಶ ಅದು ವಾಳೆಯಲ್ಲಿನ ಯುವಕರಲ್ಲಿ ಪರಸ್ಪರ ಒಗ್ಗಟ್ಟು ಹಾಗೂ ಸ್ನೇಹದ ವಾತಾವರಣವನ್ನು ಸೃಷ್ಟಿಸುವುದಾಗಿದೆ ಎಂದರು.


ಅಧ್ಯಕ್ಷತೆ ವಹಿಸಿದ್ದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ|ಅಶೋಕ್ ರಾಯನ್ ಕ್ರಾಸ್ತಾರವರು ಮಾತನಾಡಿ, ಒಗ್ಗಟ್ಟಿಗಾಗಿ ಕ್ರೀಡೆ ಎಂಬ ಹೆಸರಿನಲ್ಲಿ ಕಳೆದ 29 ವರ್ಷಗಳಿಂದ ಮಾಯಿದೆ ದೇವುಸ್ ಚರ್ಚ್ ವ್ಯಾಪ್ತಿಯ ವಾಳೆಗಳ ಮಧ್ಯೆ ಕ್ರಿಕೆಟ್ ಪಂದ್ಯಾಟ ಆಯೋಜಿಸುತ್ತಾ ಬಂದಿರುವುದು ಒಂದು ಸಾಧನೆಯಾಗಿದೆ. ಕ್ರೀಡಾಕೂಟದಲ್ಲಿ ವಾಳೆಯಲ್ಲಿನ ಯುವಕರು ಸಂಘಟಿತರಾಗಿ ಪಾಲ್ಗೊಂಡಾಗ ಒಗ್ಗಟ್ಟು ನಿಜಕ್ಕೂ ದ್ವಿಗುಣಗೊಳ್ಳುತ್ತದೆ ಎಂದರು.


ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಡಿ’ಕೋಸ್ಟ ಮಾತನಾಡಿ, ಮಾಯಿದೆ ದೇವುಸ್ ಚರ್ಚ್ ವ್ಯಾಪ್ತಿಯ ಫಲಾನುಭವಿಗಳಿಗೆ ನಾನಾ ರೀತಿಯಲ್ಲಿ ಸಿ.ಎಲ್.ಸಿ ಸಂಸ್ಥೆಯು ಸೇವೆಯನ್ನು ನೀಡುತ್ತಾ ಬಂದಿದೆ. ಈ ಸೇವೆಯು ಮುಂದಿನ ದಿನಗಳಲ್ಲಿ ನಿರಂತರ ಮುಂದುವರೆಯಲಿ ಹಾಗೆಯೇ ಮನುಷ್ಯನ ಮಾನಸಿಕ ಹಾಗೂ ದೈಹಿಕ ಅಭಿವೃದ್ಧಿಗೆ ಟೂರ್ನಮೆಂಟ್ ಟಾನಿಕ್ ಕೊಡುತ್ತದೆ. ಸೋಲು-ಗೆಲುವು ಮುಖ್ಯವಲ್ಲ, ಭಾಗವಹಿಸುವಿಕೆ ಮುಖ್ಯ ಎಂದರು.


ಸಿಎಲ್‌ಸಿ ಸಂಸ್ಥೆಯ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯದರ್ಶಿ ನವೀನ್ ಡಿ’ಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಧ್ಯಕ್ಷ ಮಾರ್ಟಿನ್ ಡಿ’ಸೋಜ ಸ್ವಾಗತಿಸಿ,
ಕಾರ್ಯದರ್ಶಿ ವಿಲಿಯಂ ನೊರೋನ್ಹಾ ವಂದಿಸಿದರು. ಸದಸ್ಯ ಜೇಸನ್ ವರ್ಗೀಸ್ ಕಾರ್ಯಕ್ರಮ ನಿರೂಪಿಸಿದರು.


ಮೊ|ಪತ್ರಾವೋರವರ ಪ್ರತಿಮೆಗೆ ಹಾರಾರ್ಪಣೆ…


ಕಳೆದ 29 ವರ್ಷಗಳಿಂದ ಶಿಕ್ಷಣ ಶಿಲ್ಪಿ ಮೊ|ಪತ್ರಾವೋರವರ ಹೆಸರಿನಲ್ಲಿ ಸಿ.ಎಲ್.ಸಿ ಸಂಸ್ಥೆಯು ಶಿಸ್ತುಬದ್ಧವಾಗಿ ಯಶಸ್ವಿಯಾಗಿ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸುತ್ತಾ ಬಂದಿರುತ್ತದೆ ಮಾತ್ರವಲ್ಲ ಕ್ರಿಕೆಟ್ ಪಂದ್ಯಾಟ ಆರಂಭಕ್ಕೆ ಮುಂಚಿತವಾಗಿ ಫಿಲೋಮಿನಾ ಪ್ರೌಢಶಾಲೆಯ ಬಳಿಯಿರುವ ಮೊ|ಪತ್ರಾವೋರವರ ಪ್ರತಿಮೆಗೆ ಹಾರಾರ್ಪಣೆ ಹಾಕಿ ಗೌರವ ಸಲ್ಲಿಸುವುದು ವಾಡಿಕೆ. ಅದರಂತೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಂ|ಅಶೋಕ್ ರಾಯನ್ ಕ್ರಾಸ್ತಾ, ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಡಿ’ಕೋಸ್ಟ,
ಸಿಎಲ್‌ಸಿ ಅಧ್ಯಕ್ಷ ಮಾರ್ಟಿನ್ ಡಿ’ಸೋಜ, ಕಾರ್ಯದರ್ಶಿ ವಿಲಿಯಂ ನೊರೋನ್ಹಾರವರು ಜೊತೆಗೂಡಿ ಮೊ|ಪತ್ರಾವೋರವರ ಪ್ರತಿಮೆಗೆ ಹಾರಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಿ.ಎಲ್.ಸಿ ಸಂಸ್ಥೆಯ ಸದಸ್ಯರು ಸಿ.ಎಲ್.ಸಿ ಲೋಗೊದೊಂದಿಗೆ ನೀಲಿ-ಹಳದಿ ಬಣ್ಣದ ಜೆರ್ಸಿಯೊಂದಿಗೆ ಉಪಸ್ಥಿತರಿದ್ದರು.

17 ವಾಳೆಗಳು..


ಮಾದೆ ದೇವುಸ್ ಚರ್ಚ್ ವ್ಯಾಪ್ತಿಯ 19 ವಾಳೆಗಳ ಪೈಕಿ 17 ವಾಳೆಗಳಾದ ಬಲ್ನಾಡು, ದರ್ಬೆ, ಗುಂಡ್ಯಡ್ಕ, ಹಾರಾಡಿ, ಕಲ್ಲಾರೆ, ಪದವು, ಪಾಂಗ್ಲಾಯಿ, ಪರ್ಲಡ್ಕ, ನಿತ್ಯಾಧರ್, ಪುತ್ತೂರು, ರೋಟರಿಪುರ, ಸಾಲ್ಮರ, ಸಾಮೆತ್ತಡ್ಕ, ಸಂಟ್ಯಾರು, ಶಿಂಗಾಣಿ, ತೆಂಕಿಲ, ಮಿತ್ತೂರು ವಾಳೆ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸುತ್ತಿದೆ.

LEAVE A REPLY

Please enter your comment!
Please enter your name here