ಬಡಗನ್ನೂರುಃ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ವವ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಫೆ. 4 ರಂದು ನಡೆಯಿತು
ಪ್ರಗತಿಪರ ಕೃಷಿಕ ರಾಮಭಟ್ಟ್ ಬೀರಮುಲೆ ಜನ ಸೇವೆಯಿಂದ ಅಭಿವೃದ್ಧಿ ಕಾರ್ಯ ನಡೆದಿದೆ. ಫಲಾಪೇಕ್ಷೆ ಇಲ್ಲದೆ ತಾವೇಲ್ಲರೂ ಕೆಲಸ ಮಾಡಿದಿರಿ, ಎಲ್ಲರಿಗೂ ಶ್ರೀ ದೇವರು ಒಳ್ಳೆಯದನ್ನು ಮಾಡಲಿ ಎಂದ ಅವರು ಮುಂದೆ ಭಾರತೀಯ ಶ್ರೇಷ್ಠ ಪರಂಪರೆ ಉಳಿಸಿ ಬೆಳೆಯುವಂತೆ ಕರೆ ನೀಡಿದರು.
ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ನಾರಾಯಣ ನಾಯ್ಕ ಮಾತನಾಡಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀನಿವಾಸ ಭಟ್ ಸಿ.ಯಾಚ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಜ್ ರೈ ಪೇರಾಲು, ಬ್ರಹ್ಮಕಲಶೋತ್ಸವ ಅರ್ಥಿಕ ಸಮಿತಿ ಅಧ್ಯಕ್ಷ ನಾರಾಯಣ ಭಟ್ ಬಿ, ಕಾರ್ಯದರ್ಶಿ ವಿಷ್ಣು ಭಟ್ ಪಡ್ಪು, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶಿವಪ್ರಸಾದ್ ಪಟ್ಟೆ, ಚಂದ್ರಶೇಖರ ಆಳ್ವ ಗಿರಿಮನೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅರಿಯಡ್ಕ ವಲಯ ಮೇಲ್ವಿಚಾರಕ ಮೋಹನ್ ಕೆ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದ ಮೊದಲು ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿಟ್ಟು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. .
ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಭಾಕರ ಗವಡ ಕನ್ನಯ, ಅಪ್ಪಯ ನಾಯ್ಕ ತಲೆಂಜಿ, ಸುಮಿತ್ರಾ ರಾಜೇಶ್ ಯು.ಕೆ, ಪ್ರಧ ಮಹಾಲಿಂಗ ಭಟ್ ಬಿ ಜೀರ್ಣೋದ್ಧಾರ ಸಮಿತಿ ಸದಸ್ಯರಾದ ಶ್ರೀನಿವಾಸ ಗೌಡ, ಕನ್ನಯ, ಜನಾರ್ದನ ಪುಜಾರಿ ಪದಡ್ಕ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷರಾದ ಮನೋಹರ ಪ್ರಸಾದ್ ರೈ, ಸುಧಾಕರ ಶೆಟ್ಟಿ ಮಂಗಳದೇವಿ, ಅಚ್ಚುತ ಭಟ್ ಪೈರುಪುಣಿ, ಉತ್ಸವ ಸಮಿತಿ ಅಧ್ಯಕ್ಷ ರಾಮಣ್ಣ ಗೌಡ ಬಸವಹಿತ್ತಿಲು ಹಾಗೂ ವಿವಿಧ ಸಮಿತಿ ಸಂಚಾಲಕರು, ಸದಸ್ಯರು ಮತ್ತು ಊರ ಭಕ್ತಾಧಿಗಳು ಭಾಗವಹಿಸಿದ್ದರು.
ಚಪ್ಪರ ಮುಹೂರ್ತ;-
ಪ್ರಾರಂಭದಲ್ಲಿ ಬ್ರಹ್ಮಕಲಶೋತ್ವವ ಅಂಗವಾಗಿ ಚಪ್ಪರ ಮುಹೂರ್ತ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ಚಪ್ಪರ ಮುಹೂರ್ತ ವಿದಿ ವಿಧಾನವನ್ನು ನೆರವೇರಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯ ಶಿವಪ್ರಸಾದ ಭಟ್ ಪಟ್ಟೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.