ನಾಳೆ(ಫೆ.7ಕ್ಕೆ), ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತ್ಯಾಗರಾಜ ಆರಾಧನಾ ಮಹೊತ್ಸವ

0

ಪುತ್ತೂರು: ಸಂಸ್ಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಭಾಗದಿಂದ ತ್ಯಾಗರಾಜ ಆರಾಧನಾ ಮಹೋತ್ಸವವು ಪುತ್ತೂರಿನ ವಿವಿಧ ಸಂಗೀತ ಶಾಲಾ ಗುರುಗಳು ಮತ್ತು ವಿದ್ಯಾರ್ಥಿಗಳಿಂದ ಪಂಚರತ್ನ ಕೀರ್ತನೆ ಗೋಷ್ಠಿಗಾಯನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಒಳಾಂಗಣದಲ್ಲಿ ಫೆ. 7ರಂದು ಸಂಜೆ ಗಂಟೆ 4.30 ರಿಂದ ಜರುಗಲಿದೆ.


ಉಡುಪಿ ಅಕಾಡೆಮಿ ಮ್ಯೂಸಿಕ್ ಸ್ಕೂಲ್‌ನ ಪ್ರಾಧ್ಯಾಪಕರಾಗಿರುವ ಕರ್ನಾಟಕ ಕಲಾಶ್ರೀ ವಿದ್ವಾನ್ ಮಧೂರು ಪಿ.ಬಾಲಸುಬ್ರಹ್ಮಣ್ಯಂ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಬಿ ಐತ್ತಪ್ಪ ನಾಯ್ಕ್ ಅವರು ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here