ಕೋಡಿಂಬಾಡಿ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ‌ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

0

ಪುತ್ತೂರು: ಕೋಡಿಂಬಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಫೆ.6ರಂದು ನಡೆಯಿತು.
ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿದರು.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶಯನ ಜಯಾನಂದ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಜಯಾನಂದ ಕೆ, ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ರಾಮಚಂದ್ರ ಪೂಜಾರಿ, ಸದಸ್ಯರಾದ ರಾಮಣ್ಣ ಗೌಡ ಗುಂಡೋಲೆ, ವಿಶ್ವನಾಥ‌ ಕೃಷ್ಣಗಿರಿ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ಪ್ರದೀಪಕುಮಾರ್ ಶೆಟ್ಟಿ ಪನಿಪಾಲು, ಭರತ್ ನಿಡ್ಯ, ಎಸ್ಡಿಎಂಸಿ ಅಧ್ಯಕ್ಷ ಶೇಖರ್ ಪೂಜಾರಿ ಜೇಡರಪಾಲು, ಉಪಾಧ್ಯಕ್ಷ ಸುರೇಶ ಶೆಟ್ಟಿ ಬರಮೇಲು, ಡಾ. ಶಿವಪ್ರಕಾಶ್ ಮೋನಡ್ಕ, ರಾಜು ಎಮ್, ಗ್ರಾ.ಪಂ. ಮಾಜಿ ಅಧ್ಯಕ್ಷೆ ರೇವತಿ ವೀರಪ್ಪ ಪೂಜಾರಿ, ಶಾಲಾ ಮುಖ್ಯ ಶಿಕ್ಷಕಿ ಸುಲೋಚನಾ, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಮೋಹನ ಪಕ್ಕಳ, ವಿಷ್ಣು ಪ್ರಭು, ಚೆನ್ನಣ್ಣ ಗೌಡ ಬರಮೇಲು, ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕ ವೀರಪ್ಪ ಪೂಜಾರಿ ಡೆಕ್ಕಾಜೆ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here