ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಗ್ರಾ.ಪಂ.ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ
ಪುತ್ತೂರು, ಕಡಬ ತಾಲೂಕಿನ ನೌಕರರೂ ಭಾಗಿ

0

ನೆಲ್ಯಾಡಿ: ಸಿ ಮತ್ತು ಡಿ ದರ್ಜೆ ಸ್ಥಾನಮಾನಕ್ಕೆ ಒತ್ತಾಯಿಸಿ ಫೆ.6ರಿಂದ ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಗ್ರಾ.ಪಂ.ನೌಕರರ ’ಬೆಂಗಳೂರು ಚಲೋ’ ಅನಿರ್ದಿಷ್ಟಾವಧಿ ಮುಷ್ಕರ 2ನೇ ದಿನ ಪೂರೈಸಿದ್ದು, ಈ ಹೋರಾಟದಲ್ಲಿ ಪುತ್ತೂರು ಹಾಗೂ ಕಡಬ ತಾಲೂಕಿನ ಗ್ರಾಮ ಪಂಚಾಯತ್‌ನ ಸಿಬ್ಬಂದಿಗಳು ಭಾಗವಹಿಸಿದ್ದಾರೆ.


ಕಳೆದ ದಶಂಬರ್ ತಿಂಗಳಿನಲ್ಲಿ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನೌಕರರು ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿಯ ಸುವರ್ಣ ಸೌಧದ ಮುಂದೆ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದರು. ಈ ವೇಳೆ ಬೇಡಿಕೆ ಈಡೇರಿಸುವ ಭರವಸೆ ಸಿಕ್ಕಿದ ಹಿನ್ನೆಲೆಯಲ್ಲಿ ನೌಕರರು ಪ್ರತಿಭಟನೆ ಹಿಂತೆಗೆದುಕೊಂಡಿದ್ದರು. ಆದರೆ ಗ್ರಾಮ ಪಂಚಾಯತ್ ನೌಕರರ ಬೇಡಿಕೆ ಈಡೇರಿಸುವ ಕುರಿತು ಸರಕಾರ ಯಾವುದೇ ಕ್ರಮ ಕೈಗೊಳ್ಳದೇ ಇದ್ದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ನೌಕರರು ಫೆ.6ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತ್ತೆ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ಈ ಹೋರಾಟದಲ್ಲಿ ಪುತ್ತೂರು ಹಾಗೂ ಕಡಬ ತಾಲೂಕಿನ ಗ್ರಾಮ ಪಂಚಾಯತ್ ನೌಕರರೂ ಪಾಲ್ಗೊಂಡಿದ್ದಾರೆ.


ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ಎರಡು ದಿನ ಪೂರೈಸಿದೆ. ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು ಆಗಮಿಸಿ ಪ್ರತಿಭಟನಾ ನಿರತರೊಂದಿಗೆ ಮಾತುಕತೆ ನಡೆಸಿದ್ದಾರೆ. ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್‌ರವರು ಪ್ರತಿಭಟನಾ ಸ್ಥಳಕ್ಕೆ ಬಂದು ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಸರಕಾರ ಬೇಡಿಕೆ ಈಡೇರಿಸುವ ತನಕ ಹೋರಾಟ ಮುಂದುವರಿಯಲಿದೆ.
-ಪುಷ್ಪಲತಾ ಗೋಳಿತ್ತೊಟ್ಟು
ಅಧ್ಯಕ್ಷರು, ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ(ಆರ್.ಡಿ.ಪಿ.ಅರ್) ಸಂಘ ಕಡಬ ತಾ| ಸಮಿತಿ

LEAVE A REPLY

Please enter your comment!
Please enter your name here