ಅಮಿತ್‌ ಶಾ ಭೇಟಿ ಹಿನ್ನೆಲೆ: ತೆಂಕಿಲ ವಿವೇಕಾನಂದ ಶಾಲಾ ಮೈದಾನಕ್ಕೆ ಉಸ್ತುವಾರಿ ಸಚಿವ ಸುನಿಲ್‌ ಕುಮಾರ್ ಭೇಟಿ, ಸ್ಥಳ ಪರಿಶೀಲನೆ

0

ಪುತ್ತೂರು: ಸುವರ್ಣ ಮಹೋತ್ಸವ ಆಚರಿಸುತ್ತಿರುವ ಪ್ರತಿಷ್ಠಿತ ಅಂತರ್ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಫೆ.11ರಂದು ಕೇಂದ್ರ ಗೃಹ ಸಚಿವರು, ಕೇಂದ್ರದ ಪ್ರಥಮ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಅವರು ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ ಕುಮಾರ್‌ರವರು ಫೆ.7ರಂದು ಸಮಾವೇಶ ನಡೆಯಲಿರುವ ಪುತ್ತೂರು ತೆಂಕಿಲ ವಿವೇಕಾನಂದ ಶಾಲೆಯ ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲನೆ ನಡೆಸಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯಕ್‌ ಉಳಿಪ್ಪಾಡಿಗುತ್ತು, ಶಾಸಕ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್‌, ನಗರಸಭೆ ಅಧ್ಯಕ್ಷ ಜೀವಂಧರ್‌ ಜೈನ್‌, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ ಜಗನ್ನಿವಾಸ ರಾವ್, ಸಾಜ ರಾಧಕೃಷ್ಣ ಆಳ್ವ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here