ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಯಶಸ್ವೀ 11ನೇ ಉಚಿತ ವೈದ್ಯಕೀಯ ಶಿಬಿರ

0

ಪುತ್ತೂರು: ನಿರಂತರವಾಗಿ ಕಳೆದ ಹತ್ತು ತಿಂಗಳಿನಿಂದ ವಿಶೇಷ ಚಿಕಿತ್ಸೆಗಳನ್ನು ಜೋಡಿಸಿಕೊಂಡು ಉಚಿತ ವೈದ್ಯಕೀಯ ತಪಾಸಣಾ ಶಿಬಿರಗಳನ್ನು ನಡೆಸಿಕೊಂಡು ಬರುತ್ತಿರುವ ಸಂಪ್ಯ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನ ಹಾಗೂ ಆರೋಗ್ಯ ರಕ್ಷಾ ಸಮಿತಿಯ ವತಿಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರದ 11 ನೇ ತಿಂಗಳ ಶಿಬಿರವು ಫೆ.5ರಂದು ದೇವಸ್ಥಾನದ ಆವರಣದಲ್ಲಿ ನಡೆಯಿತು.

ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ದಸ್ತಾವೇಜು ಬರಹಗಾರ ಪಿ.ಎಸ್‌ ಎಡಪಡಿತ್ತಾಯ,‌ ದೇವರ ಸೇವೆಯ ಜೊತೆಗೆ ಭಕ್ತರ ಆರೋಗ್ಯ ಕಾಪಾಡುವಂತಹ ಮಹಾನ್ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ತಿಂಗಳ ಶಿಬಿರದ ಪ್ರಾಯೋಕತ್ವ ನೀಡುವುದಾಗಿ ಅವರು ಘೋಷಣೆ ಮಾಡಿದರು.

ಮುಖ್ಯ ಅತಿಥಿ ನಿಡ್ಪಳ್ಳಿ ಶ್ರೀ ಶಾಂತಾದುರ್ಗ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಾರಾಯಣ ರೈ ಹಾಗೂ ಮಕ್ಕಳ ತಜ್ಞೆ ಶ್ರೀದೇವಿ ವಿಕ್ರಂ ಮಾತನಾಡಿ ದೇವಸ್ಥಾನದ ವತಿಯಿಂದ ಉತ್ತಮ ಸೇವಾ ಕಾರ್ಯ ನಡೆಯುತ್ತಿದ್ದು ಎಲ್ಲರೂ ಇದರ ಪ್ರಯೋಜನ ಪಡೆಯುವಂತಾಗಲಿ ಎಂದರು.

ಜಾತ್ರೋತ್ಸವ ಸಮಿತಿ ಅಧ್ಯಕ್ಷ ಭೀಮಯ್ಯ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆರೋಗ್ಯ ರಕ್ಷಾ ಸಮಿತಿ ಗೌರವಾಧ್ಯಕ್ಷರು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿರುವ ಡಾ.ಸುರೇಶ್ ಪುತ್ತೂರಾಯ ಮಾತನಾಡಿ, ಎಲ್ಲರ ಸಹಕಾರ, ಪ್ರೋತ್ಸಾಹದೊಂದಿಗೆ ಶಿಬಿರವು ಅತ್ಯಂತ ಯಶಸ್ವಿಯಾಗಿ ನಡೆಯುವಲ್ಲಿ ಸಹಕಾರಿಯಾಗಿದೆ ಎಂದರು.

ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಇಳಂತಾಜೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಹರಿಣಿ ಪುತ್ತೂರಾಯ ಕಾರ್ಯಕ್ರಮ ನಿರೂಪಿಸಿದರು. ಗೌರವ ಸಲಹೆಗಾರ ಅರುಣ್ ಕುಮಾರ್ ಪುತ್ತಿಲ ವಂದಿಸಿದರು.

ಚಿಕಿತ್ಸಾ ಸೌಲಭ್ಯಗಳು:
ಈ ಬಾರಿಯ ಶಿಬಿರದಲ್ಲಿ ಹೃದ್ರೋಗ ತಪಾಸಣೆ, ಕೀಲು ಮತ್ತು ಎಲುಬು ತಪಾಸಣೆ, ಮಕ್ಕಳ ಚಿಕಿತ್ಸೆ, ತಜ್ಞ ವೈದ್ಯರಿಂದ ವೈದ್ಯಕೀಯ ತಪಾಸಣೆ, ಆಯುರ್ವೇದ ವೈದ್ಯಕೀಯ ತಪಾಸಣೆ, ಇಸಿಜಿ, ಮಧುಮೇಹ ರಕ್ತಪರೀಕ್ಷೆ, ಆರೋಗ್ಯ ಇಲಾಖೆಯಿಂದ ಕೋವಿಡ್ ಬೂಸ್ಟರ್ ಡೋಸ್ ಹಾಗೂ ಉಚಿತ ಔಷಧಿಗಳನ್ನು ವಿತರಿಸಲಾಯಿತು.

ಮಕ್ಕಳ ತಜ್ಞರಾದ ಡಾ.ಮಂಜುನಾಥ ಶೆಟ್ಟಿ, ಡಾ.ಶ್ರೀದೇವಿ ವಿಕ್ರಮ್, ಎಲುಬು ತಜ್ಞ ಡಾ.ಸಚಿನ್ ಶಂಕರ್ ಹಾರಕರೆ, ಶ್ವಾಸಕೋಶ ತಜ್ಞ ಡಾ.ಪ್ರೀತಿರಾಜ್ ಬಲ್ಲಾಳ್, ವೈದ್ಯಕೀಯ ತಜ್ಞ ಡಾ,ಸುರೇಶ್ ಪುತ್ತೂರಾಯ, ಆಯುರ್ವೇದ ತಜ್ಞರಾದ ಡಾ.ವೇಣುಗೋಪಾಲ್, ಡಾ.ಸಾಯಿಪ್ರಕಾಶ್ ಹಾಗೂ ಡಾ.ದೀಕ್ಷಾ ಶಿಬಿರವನ್ನು ನಡೆಸಿಕೊಟ್ಟರು.

ನವಚೇತನ ಯುವಕ ಮಂಡಲ ಸಂಪ್ಯ, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮುಕ್ರಂಪಾಡಿ, ಐಡಿಯಲ್ ಲ್ಯಾಬೊರೇಟರಿ ಪುತ್ತೂರು, ಮಹಾವೀರ ಆಸ್ಪತ್ರೆ ಪುತ್ತೂರು, ಭಾರತೀಯ ಜನೌಷಧಿ ಕೇಂದ್ರಗಳು ಪುತ್ತೂರು, ಉಷಾ ಸ್ಕ್ಯಾನ್ ಸೆಂಟರ್ ದರ್ಬೆ, ಪುತ್ತೂರು ಡಯಾಗ್ನೋಸ್ಟಿಕ್ ಮತ್ತು ರಿಸರ್ಚ್ ಸೆಂಟರ್ ತೆಂಕಿಲ, ಹಾಗೂ ಹಲವು ಔಷಧಿ ಕಂಪೆನಿಗಳು ಶಿಬಿರದ ಯಶಸ್ವಿಗೆ ಸಹಕರಿಸಿದರು.

LEAVE A REPLY

Please enter your comment!
Please enter your name here