ಸಿಎ ಫೌಂಡೇಶನ್ ಪರೀಕ್ಷೆ: ರಾಮಕುಂಜ ಪ.ಪೂ.ಕಾಲೇಜು ವಿದ್ಯಾರ್ಥಿಗಳು ತೇರ್ಗಡೆ

0

ರಾಮಕುಂಜ: ಐಸಿಎಐ ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆಸಿದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ 2021-2022ನೇ ಸಾಲಿನ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.


ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಾದ ಶ್ರೀರಕ್ಷಾ, ಶ್ರೇಯ ಸಿಎಚ್, ಪಾರ್ಥ ಪಿ.ಎಸ್, ಮುರಳೀಧರ ವಿ ಮತ್ತು ಭರತ್ ಕುಮಾರ್‌ರವರು ತೇರ್ಗಡೆಗೊಂಡಿದ್ದಾರೆ. ಈ ವಿದ್ಯಾರ್ಥಿಗಳು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಮುಂದೆ ನಡೆಯುವ ಸಿಎ ಇಂಟರ್ಮೀಡಿಯೆಟ್ ಪರೀಕ್ಷೆಗೆ ಅರ್ಹರಾಗಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here