ಆಲಂಕಾರು ಸರಕಾರಿ ಶಾಲಾ ಕೊಠಡಿಗೆ ಸಚಿವ ಅಂಗಾರರವರಿಂದ ಗುದ್ದಲಿ ಪೂಜೆ

0

ಆಲಂಕಾರು: ದ.ಕ ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಆಲಂಕಾರಿನಲ್ಲಿ ವಿವೇಕ ಯೋಜನೆಯಡಿಯಲ್ಲಿ ಮಂಜೂರಾಗಿರುವ 26 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ತರಗತಿ ಕೊಠಡಿಗಳಿಗೆ ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರರವರು ಗುದ್ದಲಿ ಪೂಜೆ ನೇರವೆರಿಸಿದರು. ಸರಕಾರಿ ಶಾಲೆಗಳಲ್ಲಿ ಮೂಲಭೂತ ಸಮಸ್ಯೆಗಳಿಗೆ ಇದಕ್ಕಿಂತ ಮೊದಲು ಅಡಳಿತ ಮಾಡಿದ ಸರಕಾರವೇ ಕಾರಣವಾಗಿದ್ದು, ಸರಕಾರ ವಿದ್ಯಾರ್ಥಿಗಳ ಸಂಖ್ಯೆಯ ಅಧಾರದ ಮೇಲೆ ಹಂತ ಹಂತದಲ್ಲಿ ಸರಕಾರಿ ಶಾಲೆಗಳನ್ನು ಅಭಿವೃದ್ದಿ ಪಡಿಸುತ್ತಿದ್ದರೆ ಇಂತಹ ಸಮಸ್ಯೆಗಳ ಬರುತ್ತಿರಲಿಲ್ಲ. ಪ್ರಸಕ್ತ ಸನ್ನಿವೇಶದಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ರಾಜ್ಯದಲ್ಲಿ 8001 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ‌ ವಿವಿಧ ಸರಕಾರಿ ಶಾಲೆಗಳಲ್ಲಿ ಒಟ್ಟು 38 ಶಾಲಾ ಕೊಠಡಿ ನಿರ್ಮಾಣ ಮಾಡಲಿದ್ದು ಕಾಮಗಾರಿ ಸುಸೂತ್ರವಾಗಿ ನಡೆದು ಈ ಭಾಗದ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತಾಗಲಿ ಎಂದು ಹೇಳಿ ಶುಭಹಾರೈಸಿದರು. ಶಾಲಾಮುಖ್ಯೋಪಾಧ್ಯಾಯ ಕೆ.ಪಿ ನಿಂಗರಾಜು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಆಲಂಕಾರು ಗ್ರಾ.ಪಂ. ಅಧ್ಯಕ್ಷ ಸದಾನಂದ ಆಚಾರ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗನ್ನಾಥ ಶೆಟ್ಟಿ, ಉಪಾಧ್ಯಕ್ಷೆ ರೂಪಾಶ್ರೀ ಪಟ್ಟೆ
ಪ್ರಮುಖರಾದ ಪ್ರದೀಪ್ ರೈ ಮನವಳಿಕೆ, ಪೂವಪ್ಪ ನಾಯ್ಕ್ ಶಾಂತಿಗುರಿ, ಆಲಂಕಾರು ಸಿ.ಆರ್.ಪಿ ಪ್ರಕಾಶ್ ಬಾಕಿಲ, ರಾಮಕುಂಜ ಸಿ.ಆರ್.ಪಿ ಮಹೇಶ್, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ದಯಾನಂದ ಕರ್ಕೆರ ಸೇರಿದಂತೆ ಗ್ರಾ.ಪಂ ಸದಸ್ಯರು, ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ವಿದ್ಯಾರ್ಥಿಗಳ ಪೋಷಕರು, ಶಾಲಾಬೋಧಕ, ಬೋಧಕೇತರ ವರ್ಗದವರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here