ಪುತ್ತೂರು: ಸವಣೂರು ಶ್ರೀವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ ಫೆ 7 ರಂದು ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಅವರ ನೇತೃತ್ವದಲ್ಲಿ ಆರಂಭಗೊಂಡಿತು. ಫೆ. 7 ರಂದು ಬೆಳಿಗ್ಗೆ ತಂತ್ರಿಗಳ ಆಗಮನ, ಸಾಮೂಹಿಕ ಪ್ರಾರ್ಥನೆ, ಮಧ್ಯಾಹ್ನ ಕಲಶಾಭಿಷೇಕ, ದೇವರುಗಳ ಪ್ರತಿಷ್ಠಾದಿನದ ಪೂಜೆ, ಮಹಾಪೂಜೆ, ಪಲ್ಲ ಪೂಜೆ, ನಡೆಯಿತು.
ಮಧ್ಯಾಹ್ನ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈಯವರ ಸೇವಾರ್ಥ ಅನ್ನಸಂತರ್ಪಣೆ ನಡೆಯಿತು. ಸಂಜೆ ೬ರಿಂದ ದೀಪಾರಾಧನೆ, ತಾಯಂಬಕ ಸೇವೆ, ರಂಗಪೂಜೆ,ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಭೂತಬಲಿ, ವಸಂತ ಕಟ್ಟೆ ಪೂಜೆ, ಸುಡುಮದ್ದು ಪ್ರದರ್ಶನ ನಡೆಯಿತು. ಗ್ರಾಮಸ್ಥರು ಮತ್ತು ಪರವೂರ ದಾನಿಗಳ ಸೇವಾರ್ಥವಾಗಿ ರಾತ್ರಿ ಅನ್ನಸಂತರ್ಪಣೆ ನಡೆಯಿತು.
ದೇವಾಲಯದ ಆಡಳಿತ ಸಮಿತಿಯ ಅಧ್ಯಕ್ಷ ಸವಣೂರುಗುತ್ತು ವೆಂಕಪ್ಪ ಶೆಟ್ಟಿ, ಉತ್ಸವ ಸಮಿತಿಯ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ, ದೇವಾಲಯದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಬಡೆಕಿಲ್ಲಾಯ, ಅರ್ಚಕ ನಾರಾಯಣ ಬಡೆಕಿಲ್ಲಾಯ, ಜ್ಯೋತಿಷಿ ವಿಶ್ವಮೂರ್ತಿ ಬಡೆಕಿಲ್ಲಾಯ, ಉತ್ಸವ ಸಮಿತಿಯ ಕೋಶಾಧಿಕಾರಿ ರವೀಂದ್ರನಾಥ ರೈ ನೋಲ್ಮೆ, ಕಾರ್‍ಯದರ್ಶಿ ದಯಾನಂದ ಮಾಲೆತ್ತಾರು, ಉಪಾಧ್ಯಕ್ಷ ಗಂಗಾಧರ ಸುಣ್ಣಾಜೆ, ಸವಣೂರು ಗ್ರಾಮ ದೈವ ಜೀರ್ಣೋದ್ಧಾರ ಸಮಿತಿಯ ನಿಕಟಪೂರ್ವಾಧ್ಯಕ್ಷ ಪ್ರಜ್ವಲ್ ಕೆ.ಆರ್ .ಕೋಡಿಬೈಲು, ಅಧ್ಯಕ್ಷ ಪುರಂದರ ಬಾರಿಕೆ, ಸವಣೂರು ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿಯ ನಿಕಟಪೂರ್ವಾಧ್ಯಕ್ಷ ಉಮಾಪ್ರಸಾದ್ ರೈ ನಡುಬೈಲು, ಅಧ್ಯಕ್ಷ ಶ್ರೀಧರ್ ಸುಣ್ಣಾಜೆ, ಪ್ರಧಾನ ಕಾರ್‍ಯದರ್ಶಿ ರಾಘವ ಗೌಡ ಸವಣೂರು, ಬೆಳಿಯಪ್ಪ ಗೌಡ ಚೌಕಿಮಠ, ಸತೀಶ್ ಬಲ್ಯಾಯ, ಕಸ್ತೂರಿಕಲಾ ಎಸ್ ರೈ ಸವಣೂರು, ಸಂಧ್ಯಾ ವಿ.ಶೆಟ್ಟಿ ಸವಣೂರುಗುತ್ತು, ರಶ್ಮಿ ಆಶ್ವಿನ್ ಶೆಟ್ಟಿ ಸವಣೂರು, ಸುರೇಶ್ ರೈ ಸೂಡಿಮುಳ್ಳು, ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಕೃಷ್ಣಕುಮಾರ್ ಅತ್ರಿಜಾಲು, ರಾಮಕೃಷ್ಣ ಪ್ರಭು, ಸುಪ್ರೀತ್ ರೈ ಖಂಡಿಗ, ಜಯರಾಮ ಸವಣೂರು, ಸಾಂತಪ್ಪ ಗೌಡ ಪಟ್ಟೆ, ವಿಠಲ ರೈ ನೆಕ್ಕರೆ, ಕಾಂತಪ್ಪ ಪೂಜಾರಿ ಚೌಕಿಮಠ, ನಾರಾಯಣ ಪೂಜಾರಿ ಮಾಲೆತ್ತಾರು, ಶಿವಪ್ಪ ನಾಯ್ಕ, ಚಂದ್ರಾವತಿ ಎಸ್. ಸುಣ್ಣಾಜೆ, ತಾರಾನಾಥ ಸವಣೂರು ಸಹಿತ ಸಾವಿರಾರು ಮಂದಿ ಭಾಗವಹಿಸಿದರು.
ಫೆ. 8 ರಂದು ದೇವಸ್ಥಾನದಲ್ಲಿ
ಫೆ. 8 ರಂದು ಬೆಳಿಗ್ಗೆ ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ವೈದಿಕ ಮಂತ್ರಾಕ್ಷತೆ ನಡೆಯಲಿದೆ. ಮಧ್ಯಾಹ್ನ ಸವಣೂರುಗುತ್ತು ಕುಟುಂಬಸ್ಥರ ಸೇವಾರ್ಥವಾಗಿ ಅನ್ನಸಂತರ್ಪಣೆ ನಡೆಯಲಿದೆ.ರಾತ್ರಿ ೮ರಿಂದ ದೇವಸ್ಥಾನದ ಪಕ್ಕದಲ್ಲಿರುವ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ಉಳ್ಳಾಲ್ತಿ ದೈವಕ್ಕೆ ನೇಮೋತ್ಸವ ನಡೆಯಲಿದೆ. ಕವಿತಾ ವಿ. ಶೆಟ್ಟಿ ಮತ್ತು ದೇಷ್ನಾ ಶೆಟ್ಟಿ ಬೆಂಗಳೂರುರವರ ಸೇವಾರ್ಥವಾಗಿ ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಾಲಯದ ಪ್ರಕಟನೆ ತಿಳಿಸಿದೆ.