ಪುತ್ತೂರು: ಸಂಸ್ಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಭಾಗದಿಂದ ತ್ಯಾಗರಾಜ ಆರಾಧನಾ ಮಹೋತ್ಸವವು ಪುತ್ತೂರಿನ ವಿವಿಧ ಸಂಗೀತ ಶಾಲಾ ಗುರುಗಳು ಮತ್ತು ವಿದ್ಯಾರ್ಥಿಗಳಿಂದ ಪಂಚರತ್ನ ಕೀರ್ತನೆ ಗೋಷ್ಠಿಗಾಯನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಒಳಾಂಗಣದಲ್ಲಿ ಫೆ. 7ರಂದು ಸಂಜೆ ನಡೆಯಿತು.
ಉಡುಪಿ ಅಕಾಡೆಮಿ ಮ್ಯೂಸಿಕ್ ಸ್ಕೂಲ್‌ನ ಪ್ರಾಧ್ಯಾಪಕರಾಗಿರುವ ಕರ್ನಾಟಕ ಕಲಾಶ್ರೀ ವಿದ್ವಾನ್ ಮಧೂರು ಪಿ.ಬಾಲಸುಬ್ರಹ್ಮಣ್ಯಂ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿರುವ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಬಿ ಐತ್ತಪ್ಪ ನಾಯ್ಕ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಡುಪಿ ಅಕಾಡೆಮಿ ಮ್ಯೂಸಿಕ್ ಸ್ಕೂಲ್‌ನ ಪ್ರಾಧ್ಯಾಪಕರಾಗಿರುವ ಕರ್ನಾಟಕ ಕಲಾಶ್ರೀ ವಿದ್ವಾನ್ ಮಧೂರು ಪಿ.ಬಾಲಸುಬ್ರಹ್ಮಣ್ಯಂ ಅವರ ನೇತೃತ್ವದಲ್ಲಿ ಎಲ್ಲಾ ಸಂಗೀತ ಕಲಾ ಶಾಲೆಯ ಗುರುಗಳು ಮತ್ತು ಶಿಷ್ಯ ವೃಂದದವರಿಂದ ಗೋಷ್ಠಿಗಾಯನ ನಡೆಯಿತು. ಸಂಸ್ಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷೆ ರೂಪಲೇಖಾ, ಸದಸ್ಯರಾದ ಪ್ರಭಾವತಿ, ಗೋಪಾಲಕೃಷ್ಣ ವೀರಮಂಗಲ, ಶಂಕರಿಶರ್ಮ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಪದ್ಮ ಕೆ.ಆರ್ ಅಚಾರ್ಯ ಸ್ವಾಗತಿಸಿ, ಜಯಲಕ್ಷ್ಮೀ ವಂದಿಸಿದರು. ಸಂಸ್ಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಭಾಗದ ಕಾರ್ಯಕ್ರಮ ಸಂಯೋಜಕ ವಿದ್ವಾನ್ ದೀಪಕ್ ಕುಮಾರ್ ಅವರು ಕಾರ್ಯಕ್ರಮ ನಿರೂಪಿಸಿದರು.