ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ ಸಂಪನ್ನ

0

ಪುತ್ತೂರು: ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಫೆ. 7 ರಂದು ಆರಂಭಗೊಂಡು ಫೆ. 8 ರಂದು ಸಂಪನ್ನಗೊಂಡಿತು. ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ದೇವಳದ ಉತ್ಸವಾದಿಗಳು ನಡೆಯಿತು.


ಫೆ. 8 ರಂದು ಬೆಳಿಗ್ಗೆ ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, , ವೈದಿಕ ಮಂತ್ರಾಕ್ಷತೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಸವಣೂರುಗುತ್ತು ಕುಟುಂಬಸ್ಥರು ಅನ್ನದಾನದ ಸೇವಾಕರ್ತರಾಗಿದ್ದರು. ದೇವಾಲಯದ ಆಡಳಿತದಾರರಾದ ಸವಣೂರುಗುತ್ತು ಡಾ| ರತ್ನಾಕರ ಶೆಟ್ಟಿ ಮತ್ತು ಕುಟುಂಬಸ್ಥರು, ಆಡಳಿತ ಸಮಿತಿಯ ಅಧ್ಯಕ್ಷ ವೆಂಕಪ್ಪ ಶೆಟ್ಟಿ ಸವಣೂರುಗುತ್ತು, ಉತ್ಸವ ಸಮಿತಿಯ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು, ದೇವಾಲಯದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಬಡೆಕಿಲ್ಲಾಯ, ಅರ್ಚಕ ನಾರಾಯಣ ಬಡೆಕಿಲ್ಲಾಯ, ಉತ್ಸವ ಸಮಿತಿಯ ಕೋಶಾಧಿಕಾರಿ ರವೀಂದ್ರನಾಥ ರೈ ನೊಲ್ಮೆ, ಉಪಾಧ್ಯಕ್ಷ ಗಂಗಾಧರ್ ಸುಣ್ಣಾಜೆ, ಕಾರ್‍ಯದರ್ಶಿ ದಯಾನಂದ ಮಾಲೆತ್ತಾರು, ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷ ಶ್ರೀಧರ ಸುಣ್ಣಾಜೆ, ಉದ್ಯಮಿ ಎನ್.ಸುಂದರ ರೈ ಸವಣೂರು, ಸವಣೂರು ಗ್ರಾಮ ದೈವ ಜೀರ್ಣೋದ್ಧಾರ ಸಮಿತಿಯ ನಿಕಟಪೂರ್ವಾಧ್ಯಕ್ಷ ಪ್ರಜ್ವಲ್ ಕೆ.ಆರ್.ಕೋಡಿಬೈಲು, ಅಧ್ಯಕ್ಷ ಪುರಂದರ ಬಾರಿಕೆ ಸಹಿತ ಸಾವಿರಾರು ಮಂದಿ ಭಾಗವಹಿಸಿದ್ದರು.

ಜಾತ್ರೋತ್ಸವ -ಅಚ್ಚುಕಟ್ಟಾದ ವ್ಯವಸ್ಥೆ

ಸವಣೂರು-ಬೆಳ್ಳಾರೆ ರಸ್ತೆಯ ಪರಣೆಯಿಂದ ಒಂದು ಕಿ.ಮೀ ದೂರದಲ್ಲಿ ಪ್ರಕೃತಿ ರಮಣೀಯ ಪ್ರದೇಶದಲ್ಲಿ ಕಂಗೊಳಿಸುತ್ತಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ಜಾತ್ರೋತ್ಸವ ಎರಡು ದಿನಗಳ ಕಾಲ ವಿಜ್ರಂಭಣೆಯಿಂದ ನಡೆಯಿತು. ಊರ-ಪರವೂರ ಸಾವಿರಾರು ಭಕ್ತಾದಿಗಳು ಆಗಮಿಸಿ, ದೇವರ ಅನ್ನಪ್ರಸಾದ ಸ್ವೀಕರಿಸಿದರು,

LEAVE A REPLY

Please enter your comment!
Please enter your name here