ಫೆ.11 ರ ಅಮಿತ್ ಶಾ ಕಾರ್ಯಕ್ರಮದ ಯಶಸ್ಸಿಗೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

0

ಪುತ್ತೂರು: ಫೆ.11 ರಂದು ಪುತ್ತೂರು ತೆಂಕಿಲ ವಿವೇಕಾನಂದ ಶಾಲಾ ಮೈದಾನದಲ್ಲಿ ನಡೆಯಲಿರುವ ಅಡಿಕೆ ಬೆಳೆಗಾರರ ಮತ್ತು ಸಹಕಾರಿಗಳ ಸಮಾವೇಶ ಮತ್ತು ಸಮಾವೇಶಕ್ಕೆ ಬರುವ ಎಲ್ಲ ಸಾರ್ವಜನಿಕರಿಗೆ ಹಾಗು ಸಮಯಕ್ಕೆ ಸರಿಯಾಗಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುವಂತೆ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಪೂಜೆ ಸೇವೆಯೊಂದಿಗೆ ವಿಶೇಷ ಪ್ರಾರ್ಥನೆ ಮಾಡಲಾಯಿತು.


ಈ ಸಂದರ್ಭದಲ್ಲಿ ಶ್ರೀ‌ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ‌ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯ ಬಿ ಐತ್ತಪ್ಪ ನಾಯ್ಕ್, ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಬಜೆಪಿ ನಗರಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಮಾಜಿ ಅಧ್ಯಕ್ಷ ಎಸ್ ಅಪ್ಪಯ್ಯ ಮಣಿಯಾಣಿ, ಪುರಸಭೆ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು, ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಕುಮಾರ್ ಶಾಂತಿವನ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಚಂದ್ರಶೇಖರ್ ರಾವ್ ಬಪ್ಪಳಿಗೆ, ದಿಶಾ ನಾಮನಿರ್ದೇಶಿತ ಸದಸ್ಯ ರಾಮದಾಸ್ ಹಾರಾಡಿ, ಅಶೋಕ್ ಹಾರಾಡಿ, ವಿಶ್ವನಾಥ ಕುಲಾಲ್, ನವೀನ್ ಪಡಿವಾಳ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here