ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮದ ವಿವರಗಳನ್ನೊಳಗೊಂಡ 2023ರ ನೂತನ ಕ್ಯಾಲೆಂಡರ್ ಫೆ. 9ರಂದು ಶಾಸಕ ಸಂಜೀವ ಮಠಂದೂರು ಬಿಡುಗಡೆಗೊಳಿಸಿದರು.
ದೇವಳದ ನಡೆಯಲ್ಲಿ ಪ್ರಾರ್ಥನೆ ಮಾಡಿ ಬಳಿಕ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ದೇವಳದ ಉತ್ಸವಾದಿ ಕಾರ್ಯಕ್ರಮಗಳ ವಿವರಣೆಗೊಂಡಿರುವ ನೂತನ ಕ್ಯಾಲೆಂಡರ್ ಅನ್ನು ಭಕ್ತರಿಗೆ ಉಚಿತವಾಗಿ ನೀಡಲಾಗುವುದು ಇದರ ಜೊತೆಗೆ ಯುಗಾದಿ ಸಂದರ್ಭದಲ್ಲಿ ಭಾರತೀಯ ದಿನದರ್ಶಿಕೆಯ ಕ್ಯಾಲೆಂಡರ್ ಲೋಕಾರ್ಪಣೆ ಮಾಡಲಾಗುವುದು ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ತಿಳಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಬಿ ಐತ್ತಪ್ಪ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ನಗರರಸಭೆ ಸ್ಥಳೀಯ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.