ನೆಲ್ಯಾಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಠಾಣಾ ಅ.ಕ್ರ 91/2013 ಕಲಂ:147.148.149.323.506.324 IPC ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿ ಸುಮಾರು 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಬರಮೇಲು ನಿವಾಸಿ ಸಿದ್ದಪ್ಪ ಗೌಡ ಎಂಬವರ ಪುತ್ರ ವಿನಯ್ ಎಂಬವರನ್ನು ಧರ್ಮಸ್ಥಳ ಪೊಲೀಸ್ ಠಾಣೆಯ ಹೆಚ್.ಸಿ. ರಾಜೇಶ್ ಮತ್ತು ಪಿ.ಸಿ ಮಲ್ಲಿಕಾರ್ಜುನ್ ಎಂಬವರು ಫೆ.9ರಂದು ಪತ್ತೆ ಹಚ್ಚಿ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ. ಬಂಧಿತ ಆರೋಪಿ ವಿನಯ್ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕಳ್ಳತನ ಪ್ರಕರಣವೊಂದರಲ್ಲಿ ಮುಖ್ಯ ಆರೋಪಿಯಾಗಿರುತ್ತಾನೆ ಎಂದು ಪೊಲೀಸರು ತಿಳಿಸಿದ್ದಾರೆ.